ಶಾಲೆಯಲ್ಲಿ 1ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಸರ್ಕಾರಿ ಶಿಕ್ಷಕ ಅರೆಸ್ಟ್‌

1 Min Read

ಭೋಪಾಲ್: ಮಧ್ಯಪ್ರದೇಶದ (Madhya Pradesh) ಟಿಕಮ್‌ಗಢ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ (Sexual Assault) ಎಸಗಿದ ಆರೋಪದಲ್ಲಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

1ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ಗುರುವಾರ ಬೆಳಗ್ಗೆ ಶಾಲೆಗೆ ತೆರಳಿದ್ದಳು. ಅಲ್ಲಿ ಶಾಲಾ ಶಿಕ್ಷಕ, ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಮನೆಗೆ ಹಿಂತಿರುಗಿದ ನಂತರ, ಬಾಲಕಿ ತನ್ನ ಕುಟುಂಬಕ್ಕೆ ಘಟನೆಯ ಬಗ್ಗೆ ತಿಳಿಸಿದ್ದಾಳೆ. ಕುಟುಂಬ ಸದಸ್ಯರು, ಕೆಲವು ಗ್ರಾಮಸ್ಥರೊಂದಿಗೆ ಪಲೇರಾ ಪೊಲೀಸ್ ಠಾಣೆಯಲ್ಲಿ ಜಮಾಯಿಸಿ ಈ ವಿಷಯದ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಕೊಡಿ, ಇಲ್ಲದಿದ್ರೆ ಶಾಲೆಗಳ ಮಾನ್ಯತೆ ರದ್ದು – ಸುಪ್ರೀಂ ವಾರ್ನಿಂಗ್

ಕ್ರಮ ಕೈಗೊಂಡ ಪೊಲೀಸರು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಹಿತಾ (BNS) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.

ಜಿಲ್ಲೆಯ ಪಲೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಶಿಕ್ಷಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಬೆಳಕಿಗೆ ಬಂದಿದೆ. ಆರೋಪಿ ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಹಿತಾ (ಬಿಎನ್‌ಎಸ್) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಟಿಕಮ್‌ಗಢ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ವಿಕ್ರಮ್ ಸಿಂಗ್ ತಿಳಿಸಿದ್ದಾರೆ.

ಆರೋಪಿಯನ್ನು ಜೈಲಿಗೆ ಹಾಕಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹರಿಯಾಣ | ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಬೆಂಗಳೂರಿನ ಟೆಕ್ಕಿ ಶವವಾಗಿ ಪತ್ತೆ

Share This Article