ಇಂದು ರಾಯಚೂರಿಗೆ ಸಿಎಂ – ತಿಂಥಣಿ ಬ್ರಿಡ್ಜ್ ಕನಕಗುರು ಪೀಠಕ್ಕೆ ಭೇಟಿ

1 Min Read

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದು (ಜ.1) ರಾಯಚೂರು (Raichuru) ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ತಿಂಥಣಿ ಬ್ರಿಡ್ಜ್ ಕನಕಗುರು ಪೀಠಕ್ಕೆ ಭೇಟಿ ನೀಡಲಿದ್ದಾರೆ.

- Advertisement -

ಇಂದು ಬೆಳಿಗ್ಗೆ 10ಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಕಲಬುರಗಿ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಯಾದಗಿರಿಯ ಬಂಡೊಳ್ಳಿಗೆ ಬಂದು, ಅಲ್ಲಿಂದ ರಸ್ತೆ ಮಾರ್ಗವಾಗಿ ರಾಯಚೂರಿನ ದೇವದುರ್ಗದ ತಿಂಥಣಿ ಬ್ರಿಡ್ಜ್ ಕನಕಗುರು ಪೀಠಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಸಿದ್ದರಾಮನಂದ ಸ್ವಾಮಿ ಪುಣ್ಯಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಇಂದು ನಿರ್ಮಲಾ ಸೀತಾರಾಮನ್‌ರಿಂದ ದಾಖಲೆಯ 9ನೇ ಕೇಂದ್ರ ಬಜೆಟ್ ಮಂಡನೆ

- Advertisement -

ಮುಖ್ಯಮಂತ್ರಿ ಜೊತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಶಿವರಾಜ್ ತಂಗಡಗಿ, ಬೈರತಿ ಸುರೇಶ್, ಎನ್.ಎಸ್.ಬೋಸರಾಜು ಸೇರಿ ಹಲವು ಸಚಿವರು ಭಾಗಿಯಾಗಿದ್ದಾರೆ.

- Advertisement -

- Advertisement -

Share This Article