ಗಾಂಧಿ ಹೆಸರಿನಲ್ಲಿ ಹೊಸ ಯೋಜನೆ ಪ್ರಕಟ

1 Min Read

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾಯ್ದೆಯನ್ನು (Mahatma Gandhi NREGA) ಬದಲಿಸಿ ಗಾಂಧಿ ಹೆಸರನ್ನು ಕೈಬಿಟ್ಟದ್ದಕ್ಕೆ ಟೀಕೆ ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಈಗ ಗಾಂಧಿ (Gandhi) ಹೆಸರಿನಲ್ಲಿ ಹೊಸ ಯೋಜನೆಯನ್ನು ಪ್ರಕಟಿಸಿದೆ.

- Advertisement -

ಖಾದಿ, ಕೈಮಗ್ಗ ಮತ್ತು ಕರಕುಶಲ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ’ಯನ್ನು ಜಾರಿಗೆ ತರುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala ಬಜೆಟ್‌ ಭಾಷಣದಲ್ಲಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಟ್ರಂಪ್‌ ಟ್ಯಾರಿಫ್‌ಗೆ ನಿರ್ಮಲಾ ಟಾನಿಕ್‌ – ಕಸ್ಟಮ್ಸ್ ಸುಂಕ ವಿನಾಯಿತಿ ಘೋಷಣೆ

- Advertisement -

 

 ಉದ್ಯೋಗ ಖಾತ್ರಿ ಯೋಜನೆಯಿಂದ ಗಾಂಧಿ ಹೆಸರನ್ನು ಕೈಬಿಟ್ಟಿದ್ದಕ್ಕೆ ವಿರೋಧ ಪಕ್ಷಗಳು ಮುಖ್ಯವಾಗಿ ಕಾಂಗ್ರೆಸ್‌ ಕೇಂದ್ರದ ವಿರುದ್ಧ ಭಾರೀ ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನೆಗೆ ತಿರುಗೇಟು ಎನ್ನುವಂತೆ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆಯನ್ನು ಪ್ರಕಟಿಸಲಾಗಿದೆ. ಇದನ್ನೂ ಓದಿ: Union Budget 2026 | ಕರ್ನಾಟಕಕ್ಕೆ ಸಿಕ್ಕಿದ್ದೇನು? – ಈಡೇರದ ನಿರೀಕ್ಷೆಗಳೇನು?

- Advertisement -

‘ಒಂದು ಜಿಲ್ಲೆ, ಒಂದು ಉತ್ಪನ್ನ ಪರಿಕಲ್ಪನೆʼಯಡಿಯಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಅನುಷ್ಠಾನಕ್ಕೆ ಬರಲಿದೆ. ಈ ಯೋಜನೆಯ ಮೂಲಕ ಖಾದಿ ಉದ್ಯಮ ಮತ್ತು ಕರಕುಶಲ ವಸ್ತುಗಳ ಉತ್ಪಾದನೆ, ತರಬೇತಿ, ಕೌಶಲಾಭಿವೃದ್ಧಿ ಮತ್ತು ಜಾಗತಿಕ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶ ಹೆಚ್ಚಿಸಲಾಗುತ್ತದೆ.

ನೇಕಾರರು, ಗ್ರಾಮೀಣ ಕೈಗಾರಿಕೆಗಳು, ಗ್ರಾಮೀಣ ಪ್ರದೇಶದಲ್ಲಿರುವ ಯುವಕರು ಈ ಯೋಜನೆಯಿಂದ ಪ್ರಯೋಜನ ಪಡೆದುಕೊಳ್ಳಲಿದ್ದಾರೆ. ಇದರಿಂದಾಗಿ ಗ್ರಾಮೀಣ ಭಾರತದ ಉತ್ಪನ್ನಗಳು ಜಾಗತಿಕ ಮಟ್ಟಕ್ಕೆ ಹೋಗಲು ಸಹಾಯವಾಗಲಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

- Advertisement -

Share This Article