ಚಿತ್ರದುರ್ಗ ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ

1 Min Read

ನವದೆಹಲಿ: ಚಿತ್ರದುರ್ಗ (Chitradurga) ಜಿಲ್ಲೆಯ ರೈತರು 2025ರ ಖರೀಫ್ ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಗೊಳಗಾಗಿದ್ದರು. ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ (Pradhan Mantri Fasal Bima Yojana) ಅಡಿಯಲ್ಲಿ ಸುಮಾರು 7,880 ರೈತರಿಗೆ ಒಟ್ಟು 12.40 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು (Crop Insurance Compensation) ಬಿಡುಗಡೆ ಮಾಡಲಾಗಿದೆ.

- Advertisement -

ಸಂಸದ ಗೋವಿಂದ ಕಾರಜೋಳ (Govinda Karajola) ಅವರು ಲೋಕಸಭೆಯಲ್ಲಿ ಕೇಳಿದ ಚುಕ್ಕೆರಹಿತ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ ಆರ್.ಎನ್.ಕೆ. ಠಾಕೂರ್ ಅವರು ಲಿಖಿತ ಉತ್ತರ ನೀಡಿದ್ದಾರೆ. ಈ ಉತ್ತರದಲ್ಲಿ 2016ರಿಂದ ಕರ್ನಾಟಕದಲ್ಲಿ ಯಶಸ್ವಿಯಾಗಿ ಜಾರಿಯಲ್ಲಿದ್ದು, ಇದುವರೆಗೆ ರಾಜ್ಯದ 1.34 ಕೋಟಿ ಅರ್ಜಿಗಳಿಗೆ ಒಟ್ಟು 18,783 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು ರೈತರಿಗೆ ಪಾವತಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

- Advertisement -

ಚಿತ್ರದುರ್ಗ ಜಿಲ್ಲೆಯಲ್ಲಿ ಬಿಡುಗಡೆಯಾದ 12.40 ಕೋಟಿ ರೂ. ಪರಿಹಾರವು ಸಂಕಷ್ಟದಲ್ಲಿರುವ ರೈತ ಕುಟುಂಬಗಳಿಗೆ ಮಹತ್ವದ ಆರ್ಥಿಕ ನೆರವಾಗಿದ್ದು, ಅವರ ಜೀವನೋಪಾಯಕ್ಕೆ ಹೊಸ ಭರವಸೆ ನೀಡಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

- Advertisement -

- Advertisement -

Share This Article