ರಾಜ್ಯಕ್ಕೆ ಇನ್ನೊಂದು ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನು ಭೇಟಿಯಾದ ಹೆಚ್‌ಡಿಕೆ

2 Min Read

– ಬೆಂಗಳೂರು-ಪುಣೆ ನಡುವೆ 4ನೇ ಹೈ-ಸ್ಪೀಡ್ ರೈಲ್ವೆ ಕಾರಿಡಾರ್
– ಬೆಂಗಳೂರು-ಮುಂಬೈ ನಡುವೆ ಹೊಸ ರೈಲು; ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ನಿಲುಗಡೆಗೆ ಮನವಿ

ನವದೆಹಲಿ: ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿ ರೈಲ್ವೆ ಮೂಲಸೌಕರ್ಯ ವೃದ್ಧಿಸುವ ಹಾಗೂ ರಾಜ್ಯದ ಇನ್ನೂ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರು ಕೇಂದ್ರದ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್‌ (Ashwini Vaishnaw) ಜೊತೆಗೆ ಚರ್ಚೆ ನಡೆಸಿದರು.

ಈಗಾಗಲೇ ರಾಜ್ಯಕ್ಕೆ ಹೈ-ಸ್ಪೀಡ್ ರೈಲು ಕಾರಿಡಾರ್‌ಗಳನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಅದಕ್ಕೆ ಹೆಚ್ಚುವರಿಯಾಗಿ ಬೆಂಗಳೂರು-ಪುಣೆ ಹೈ-ಸ್ಪೀಡ್ ರೈಲು ಕಾರಿಡಾರ್ ನೀಡಲಾಗಿದೆ. ಈ ಮಾರ್ಗವು ಹುಬ್ಬಳ್ಳಿ, ಬೆಳಗಾವಿ ಮೂಲಕ ಹಾದು ಹೋಗಲಿದೆ ಎಂಬುದಾಗಿ ರೈಲ್ವೆ ಸಚಿವರು ತಮಗೆ ತಿಳಿಸಿದರು ಎಂದು ಹೆಚ್‌ಡಿಕೆ ಹೇಳಿದರು. ಇದನ್ನೂ ಓದಿ: ಬೆಂಗಳೂರು – ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ

ಬೆಂಗಳೂರು-ಮುಂಬೈಗೆ ಹೊಸ ರೈಲು ಆರಂಭಿಸಲಾಗುವುದು ಎನ್ನುವ ಮಾಹಿತಿಯನ್ನು ರೈಲ್ವೆ ಸಚಿವರು ತಮಗೆ ಮಾಹಿತಿ ನೀಡಿದರು. ಬೆಂಗಳೂರು-ಪುಣೆ ಹೈ-ಸ್ಪೀಡ್ ರೈಲು ಕಾರಿಡಾರ್ ಹಾಗೂ ಬೆಂಗಳೂರು-ಮುಂಬೈ ನಡುವಿನ ಹೊಸ ರೈಲಿನಿಂದ ಕರ್ನಾಟಕಕ್ಕೆ ಮತ್ತಷ್ಟು ಅನುಕೂಲ ಆಗಲಿದೆ ಎಂದು ಹೆಚ್‌ಡಿಕೆ ತಿಳಿಸಿದರು.

ಹೊಸ ರೈಲು ಸಂಪರ್ಕ ಮತ್ತು ಹಾಲಿ ರೈಲು ಮಾರ್ಗಗಳಲ್ಲಿ ವನ್ಯಜೀವಿಗಳ ಅಪಘಾತಗಳನ್ನು ತಡೆಗಟ್ಟಲು ರೈಲ್ವೆ ಬೇಲಿ ಮತ್ತು ಬ್ಲಾಕ್ ಕಾರಿಡಾರ್‌ಗಳ ಅನುಷ್ಠಾನದ ಕುರಿತು ವಿವರವಾದ ಮಾತುಕತೆ ನಡೆಸಲಾಯಿತು ಎಂದು ಹೇಳಿದರು.

ಮಂಡ್ಯದಲ್ಲಿ ರೈಲ್ವೆ ಮೂಲಸೌಕರ್ಯದ ಬಗ್ಗೆ ಚರ್ಚೆ:
ಮಂಡ್ಯ ಲೋಕಸಭೆ ಕ್ಷೇತ್ರವೂ ಸೇರಿದಂತೆ ಕರ್ನಾಟಕದ ಎಲ್ಲಾ ಬಾಕಿ ಇರುವ ರೈಲ್ವೆ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ಒಡೆಯರ್ ಎಕ್ಸ್‌ಪ್ರೆಸ್‌ ರಾಮನಗರದಲ್ಲಿ ನಿಲುಗಡೆಯನ್ನು ಕೋರಿ ಮನವಿ ಮಾಡಲಾಯಿತು. ಅಲ್ಲದೆ, ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಮಂಡ್ಯ ಜಿಲ್ಲೆಯಲ್ಲಿ ಸುಧಾರಿತ ಆಧಾರ್ ಸೇವೆಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ಬಗ್ಗೆ ಕೂಡ ರೈಲ್ವೆ ಸಚಿವರಿಗೆ ಮನವರಿಕೆ ಮಾಡಲಾಯಿತು. ಇದನ್ನೂ ಓದಿ: Budget 2026: ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯ, ಸಂಪರ್ಕ ಮತ್ತು ಸಾರ್ವಜನಿಕ ಸೇವಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರ ಜತೆ ನಡೆಸಿದ ಫ್ರಲಪ್ರದವಾಗಿತ್ತು ಎಂದು ಅವರು ಹೇಳಿದರು. ತಮ್ಮ ಮನವಿಗಳ ಬಗ್ಗೆ ಕೇಂದ್ರ ರೈಲ್ವೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Share This Article