ಕೆ.ಆರ್. ನಗರ ಮಹಿಳೆಯ ಅಪಹರಣ ಕೇಸ್‌ – ಹೆಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌

1 Min Read

ಬೆಂಗಳೂರು: ಕೆ.ಆರ್‌. ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ (K.R. Nagar Women Kidnap Case) ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ.ರೇವಣ್ಣಗೆ (H.D.Revanna) ಹೈಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ.

- Advertisement -

ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುನಿಲ್‌ ದತ್‌ ಯಾದವ್‌ ಅವರಿದ್ದ ಹೈಕೋರ್ಟ್‌ ಪೀಠ ಆದೇಶ ಹೊರಡಿಸಿದೆ. ಇದನ್ನೂ ಓದಿ: ಮಾಜಿ ಸಚಿವ ಎಚ್.ಡಿ.ರೇವಣ್ಣ ಬೆನ್ನಲ್ಲೇ ಪತ್ನಿ ಭವಾನಿಗೂ ಸಂಕಷ್ಟ!

- Advertisement -

- Advertisement -

ಹೆಚ್‌.ಡಿ.ರೇವಣ್ಣ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿದ್ದಾರೆಂಬ ಕಾರಣ ನೀಡಿ ಮನವಿ ಮಾಡಿದ್ದರು. ಹೆಚ್.ಡಿ.ರೇವಣ್ಣ ಪರ ವಕೀಲರ‌ ಮನವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.

- Advertisement -

ಹೆಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೋರ್ಟ್‌ ತೆರವು ಮಾಡಿದೆ. ಇದನ್ನೂ ಓದಿ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು – ಮೈಸೂರು, ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು

Share This Article