ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

1 Min Read

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ‌ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ (Satish Sail) ಹೈಕೋರ್ಟ್‌ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ.

- Advertisement -

ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೈಕೋರ್ಟ್‌ ತಿಳಿಸಿದೆ. ಲಿವರ್ ಕಸಿ ಕುರಿತು 2 ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು. ಎಂಟು ವಾರಗಳಿಗೊಮ್ಮೆ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು‌ ಕೋರ್ಟ್‌ ನಿರ್ದೇಶನ ನೀಡಿದೆ. ಇದನ್ನೂ ಓದಿ: ಅಬುದಾಬಿಯ ಲಕ್ಕಿ ಡ್ರಾ- ಉಡುಪಿಯ ಯುವಕನಿಗೆ 49 ಕೋಟಿ ರೂ. ಬಹುಮಾನ

- Advertisement -

- Advertisement -

ಪ್ರಾಸಿಕ್ಯೂಷನ್ ಸಾಕ್ಷ್ಯದ ಮೇಲೆ ಪ್ರಭಾವ ಬೀರಬಾರದು. ವಿಚಾರಣಾ ನ್ಯಾಯಾಲಯ ವಿಚಾರಣೆಗೆ ತೊಂದರೆ ಉಂಟು ಮಾಡಬಾರದು. ಐದು ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಒಂದು ಭದ್ರತಾ ಖಾತರಿ ಒದಗಿಸಬೇಕು ಎಂದು ಹೈಕೋರ್ಟ್‌ ಷರತ್ತು ವಿಧಿಸಿದೆ.

- Advertisement -

Share This Article