ಸಿಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆ ಚುರುಕು – ಪೊಲೀಸರಿಂದ ಐಟಿ ಅಧಿಕಾರಿಗಳ ವಿಚಾರಣೆ

1 Min Read

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆ ಚುರುಕುಗೊಂಡಿದ್ದು, ಪೊಲೀಸರು ಐಟಿ ಅಧಿಕಾರಿಗಳ ವಿಚಾರಣೆ ನಡೆಸಿದ್ದಾರೆ.

ಕೇರಳದ ಐಟಿ ಅಧಿಕಾರಿಗಳಾದ ನಿತೀನ್ ಬಿಜು, ಕೃಷ್ಣಪ್ರಸಾದ್ ಸೇರಿದಂತೆ ನಾಲ್ವರ ವಿಚಾರಣೆ ನಡೆಸಿದ್ದಾರೆ. ಆತ್ಮಹತ್ಯೆಯಾದ ದಿನ ನಡೆದ ಬೆಳೆವಣಿಗೆಗಳು, ಆತ್ಮಹತ್ಯೆಗೆ ಪ್ರಚೋದನೆ ನೀಡುವವರ ರೀತಿಯಲ್ಲಿ ಐಟಿ ಅಧಿಕಾರಿಗಳು ಒತ್ತಡ ಹೇರಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.ಇದನ್ನೂ ಓದಿ: ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಕೇರಳ ಎಂಟ್ರಿ – ನ್ಯಾಯಾಂಗ ತನಿಖೆ ಕೋರಿ ಕೇಂದ್ರಕ್ಕೆ ಸಿಎಂ ಪತ್ರ

ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಅವರು ತಮ್ಮ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿಯೇ ಐಟಿ ಅಧಿಕಾರಿಗಳ ದಾಳಿ ವೇಳೆ ಗನ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

 

Share This Article