ಮಹಾಶಿವರಾತ್ರಿ ಸಂಭ್ರಮ – ಕೋಲಾರದ ಸೋಮೇಶ್ವರ ದೇವಾಲಯದಲ್ಲೂ ವಿಶೇಷ ಪೂಜೆ

1 Min Read

– ಟಿ-20 ಕ್ರಿಕೆಟ್‌ನಲ್ಲಿ ಭಾರತ ಗೆಲುವು ಸಾಧಿಸಲಿ ಎಂದು ಹೋಮ

ಕೋಲಾರ: ಇಂದು ನಾಡಿನೆಲ್ಲೆಡೆ ಮಹಾಶಿರಾತ್ರಿ (Maha Shivratri) ಆಚರಣೆಯನ್ನ ಅತ್ಯಂತ ಶ್ರದ್ದಾ ಭಕ್ತಿಯಿಂದ ಆಚರಣೆ ಮಾಡಲಾಗುತ್ತಿದೆ. ಅದರಂತೆ ಇಂದು ಎಲ್ಲೆಡೆ ಶಿವನ ನಾಮ ಸ್ಮರಣೆ ನಡೆಯುತ್ತಿದ್ದು, ಕೋಲಾರದ (Kolar) ಐತಿಹಾಸಿಕ ಹಿನ್ನೆಲೆ ಹೊಂದಿರುವ ಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ (Someshwara Temple) ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕೋಲಾರ ನಗರದ ಕೋಟಿಯಲ್ಲಿರುವ ಶ್ರೀ ಸೋಮೇಶ್ವೇರ ದೇವಾಲಯದಲ್ಲಿ ಬೆಳಗ್ಗೆಯಿಂದ ದೇವರ ದರ್ಶನಕ್ಕಾಗಿ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾದರು. ಬೆಳಗ್ಗೆ 6 ಗಂಟೆಯಿಂದ ದೇವರ ದರ್ಶನಕ್ಕೆ ಭಕ್ತಾಧಿಗಳು ಸಾಲುಗಟ್ಟಿ ನಿಂತು ದೇವರ ದರ್ಶನ ಪಡೆದಿದ್ದು ವಿಶೇಷ. ಇನ್ನೂ ಬೆಳಗ್ಗೆ ದೇವರಿಗೆ ರುದ್ರಾಭಿಷೇಕ, ಅಭಿಷೇಕ ಜೊತೆಗೆ ದೇವರಿಗೆ ವಿಶೇಶ ಹೂವಿನ ಅಲಂಕಾರ ಮಾಡಲಾಗಿತ್ತು. ಈಶ ಫೌಂಡೇಷನ್ ಮಾದರಿಯಲ್ಲಿ ದೇವಾಲಯದ ಆವರಣದಲ್ಲಿ ಶಿವನ ಮೂರ್ತಿ ನಿರ್ಮಾಣ ಮಾಡಲಾಗಿದ್ದು, ಸಾಕಷ್ಟ ಭಕ್ತಾಧಿಗಳು ದೇವರ ಮುಂದೆ ನಿಂತು ಸೆಲ್ಫಿಗಳನ್ನು ಪಡೆದರು. ಇನ್ನು ದೇವಾಲಯಕ್ಕೆ ಬರುವ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿನಿಯೋಗವನ್ನು ಮಾಡಲಾಯಿತು. ಸಂಜೆ ದೇವಾಲಯದ ಪಕ್ಕದಲ್ಲಿರುವ ಕಲ್ಯಾಣಿಯಲ್ಲಿ ದೀಪೋತ್ಸವ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ.

ಇನ್ನೂ ಇಂದು ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಶ್ರೀಲಂಕಾದ ಕೊಲಂಬೋದಲ್ಲಿ ಟಿ-20 ಕ್ರಿಕೆಟ್ ಪಂದ್ಯಾವಳಿ ಇರುವ ಹಿನ್ನೆಲೆ ಭಾರತ ಗೆಲುವು ಸಾಧಿಸಲಿ ಎಂದು ದೇವರಿಗೆ ವಿಶೇಷ ಪೂಜೆ ಹೋಮ ಹವನ ಮಾಡಲಾಗಿತ್ತು. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು.

Share This Article