ಸಂಸದೆ ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಡಿಕೆಶಿ ಭೇಟಿ

1 Min Read

ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ (Kamakhya Temple) ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಜೊತೆ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಇದನ್ನೂ ಓದಿ: AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರೊಂದಿಗಿಂದು (ಫೆ.19) ಅಸ್ಸಾಂನ ಗುವಾಹಟಿಯಲ್ಲಿರುವ ಪವಿತ್ರ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದೆವು. ತಾಯಿ ಕಾಮಾಕ್ಯ ಆಶೀರ್ವಾದವು ಎಲ್ಲರಿಗೂ ಶಕ್ತಿ ಮತ್ತು ಸಮೃದ್ಧಿ ನೀಡಲಿ ಎಂದು ಪಾರ್ಥಿಸಿದ್ದಾರೆ.

Share This Article