ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ – ಪೊಲೀಸರ ಮೇಲೂ ಬಿತ್ತು ಕಲ್ಲು

1 Min Read

– ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು: ಶಿವಾಜಿ ಜಯಂತಿ (Shivaji Jayanti) ಮೆರವಣಿಗೆ ವೇಳೆ ಕಲ್ಲು ತೂರಾಟ (Stone Pelting) ನಡೆದ ಘಟನೆ ಬಾಗಲಕೋಟೆಯ(Bagalkote) ಕಿಲ್ಲಾ ಓಣಿಯಲ್ಲಿ ನಡೆದಿದೆ.

ಶಾಂತವಾಗಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಿದ್ದಾರೆ ಎಂದು ಹಿಂದೂ ಸಂಘಟನೆಗಳ (Hindu Organization) ನಾಯಕರು ದೂರಿದ್ದಾರೆ.

ಮಸೀದಿ‌ ಕಡೆಯಿಂದ ಕಲ್ಲು ಬಂದಿದೆ.ನಮ್ಮ ಕಾರ್ಯಕರ್ತರ ಜೊತೆಗೆ ಬೆಳಗಾವಿ ಎಸ್‌ಪಿ, ಪೊಲೀಸರ ಮೇಲೂ ಕಲ್ಲು ಬಿದ್ದಿದೆ ಎಂದು ಹಿಂದೂ ಮುಖಂಡರು ಪಬ್ಲಿಕ್‌ ಟಿವಿಗೆ ತಿಳಿಸಿದ್ದಾರೆ.

ಕಲ್ಲು ತೂರಿದ ಬೆನ್ನಲ್ಲೇ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಪೊಲೀಸರು ಜನರನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

Share This Article