ನೆಲಮಂಗಲ | ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ – ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ

0 Min Read

ನೆಲಮಂಗಲ: ಇಲ್ಲಿನ‌ ಪರ್ಫ್ಯೂಮ್ ಗೋದಾಮು ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿದೆ.

ನೆಲಮಂಗಲ ರಸ್ತೆಯ ಮಾಕಳಿ ಬಳಿ ಈ ಅವಘಡ ಸಂಭವಿಸಿದೆ. ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಹಬ್ಬಿದ್ದು, ಭಯಾನಕ ಶಬ್ದ ಕೇಳಿಬರುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.

ಬೆಂಕಿ ಬೀಳುತ್ತಿದ್ದಂತೆ ಅದರಲ್ಲಿದ್ದ, 40 ಸಿಬ್ಬಂದಿ ಅಲ್ಲಿಂದ ಓಡಿ ಪಾರಾಗಿದ್ದಾರೆ. ಬೆಂಕಿ ಪಕ್ಕದ ಎಸಿ ಗೋಡೌನ್‍ಗೆ ತಗುಲಿದೆ. ಅಲ್ಲದೇ ಗೋಡೌನ್‍ನಲ್ಲಿದ್ದ ವಾಹನಗಳು ಸುಟ್ಟು ಕರಕಲಾಗಿವೆ.

Share This Article