ನಾಪೋಕ್ಲಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಯುವಕರಿಂದ ಮಾರಣಾಂತಿಕ ಹಲ್ಲೆ

1 Min Read

ಮಡಿಕೇರಿ: ಹಿಂದೂ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು(Napoklu) ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.

ಬಲ್ಲಮಾವಟಿಯಲ್ಲಿ ಶನಿವಾರ ಆಯೋಜಿಸಲಾದ ಬೃಹತ್ ಹಿಂದೂ ಸಮಾವೇಶ(Hindu Samavesha) ಕಾರ್ಯಕ್ರಮದ ಅಂಗವಾಗಿ ಹಿಂದೂ ಯುವಕರು ಪಿಕ್ ಅಪ್ ವಾಹನದಲ್ಲಿ ಪ್ರಕಟಣೆ ಮಾಡುತ್ತಾ ಸಾಗುತ್ತಿದ್ದರು.

ಈ ವೇಳೆ ಮೈಕಿನಲ್ಲಿ ಪ್ರಕಟಣೆ ಮಾಡಬಾರದು ಎಂದು ‌ಅನ್ಯಕೋಮಿನ ಕೆಲ ಯುವಕರು ನಾಪೋಕ್ಲು ಪಟ್ಟಣದ ಪೊನ್ನಾಡ್ ಸೂಪರ್ ಮಾರ್ಕೆಟ್ ಮುಂಭಾಗದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಗೌತಮ್ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬಾಗಲಕೋಟೆ ಕಲ್ಲು ತೂರಾಟ ಕೇಸ್‌ | ಹಿಂದೂ ಯುವಕರ ಬಂಧನ ವೇಳೆ ಪೊಲೀಸರ ಅಡ್ಡಗಟ್ಟಿ ಪ್ರತಿಭಟಿಸಿದ ಮಹಿಳೆಯರು

ಘಟನೆಗೆ ವಿರೋಧಿಸಿ ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಗಳಿಂದ ಆರೋಪಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ರಸ್ತೆ ತಡೆ ನಡೆಸಿದ್ದಾರೆ. ಕಾಂಗ್ರೆಸ್‌ನ ಪ್ರಭಾವಿ ನಾಯಕರ ಮಕ್ಕಳಿಂದ ಹಿಂದೂ ಯುವಕರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಶೀದ್, ಸಿದ್ದಿಕ್, ಸುಹೇಲ್, ರಾಫಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಈ ಪೈಕಿ ಸುಹೇಲ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದು ಮೂವರಿಗಾಗಿ ಶೋಧ ನಡೆಸಲಾಗುತ್ತಿದೆ.

Share This Article