ನವದೆಹಲಿ: ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ಹತ್ಯೆಯ ಬಗ್ಗೆ ಕೇಂದ್ರ ಸರ್ಕಾರದ ಮೌನಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಖಂಡನೆ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮೌನವಾಗಿರುವುದು ತಟಸ್ಥವಲ್ಲ, ಬದಲಾಗಿ ಪರಾತ್ಯಾಗ ಎಂದು ಟಾಂಗ್ ಕೊಟ್ಟಿದ್ದಾರೆ. ಇರಾನ್ ಭಾರತದ ಸಹಾಯಕ್ಕೆ ಬಂದ ಹಲವಾರು ಸಂದರ್ಭಗಳನ್ನು ನರೇಂದ್ರ ಮೋದಿ (Narendra Modi) ಸರ್ಕಾರಕ್ಕೆ ಸೋನಿಯಾ ಗಾಂಧಿ ನೆನಪಿಸಿದ್ದಾರೆ. ಖಮೇನಿಯವರ ಸಾವಿನ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ಮಧ್ಯಪ್ರಾಚ್ಯ ಪ್ರದೇಶದಲ್ಲಿ ಸಂಯಮ ಮತ್ತು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಕರೆ ನೀಡಿದೆ. ಇದನ್ನೂ ಓದಿ: Iran Israel War | ದುಬೈಗೆ ಹೊರಟಿದ್ದ ವಿಮಾನ ಬೆಂಗಳೂರಿಗೆ ವಾಪಸ್
ಮಾರ್ಚ್ 1 ರಂದು, ಇರಾನ್ ತನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಹೊಸೇನಿ ಖಮೇನಿ ಅವರನ್ನು ಅಮೆರಿಕ ಮತ್ತು ಇಸ್ರೇಲ್ ಹಿಂದಿನ ದಿನ ನಡೆಸಿದ ಗುರಿ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ದೃಢಪಡಿಸಿತು. ನಡೆಯುತ್ತಿರುವ ಮಾತುಕತೆಗಳ ಮಧ್ಯೆ ಹಾಲಿ ರಾಷ್ಟ್ರದ ಮುಖ್ಯಸ್ಥರ ಹತ್ಯೆಯು ಸಮಕಾಲೀನ ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಗಂಭೀರ ಬಿರುಕು ಮೂಡಿಸುತ್ತದೆ. ಭಾರತದ ಮೌನವು ಅಷ್ಟೇ ಸ್ಪಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಖಮೇನಿಯವರ ಸಾವಿನ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಹೇಳಿಕೆ ನೀಡಿಲ್ಲ.ಆದರೆ, ಮಧ್ಯಪ್ರಾಚ್ಯ ಪ್ರದೇಶದಲ್ಲಿ ಸಂಯಮ ಮತ್ತು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಕರೆ ನೀಡಿದೆ.
ಮಾ.1 ರಂದು, ಇರಾನ್ ತನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಹೊಸೇನಿ ಖಮೇನಿ ಅವರನ್ನು ಅಮೆರಿಕ ಮತ್ತು ಇಸ್ರೇಲ್ ಹಿಂದಿನ ದಿನ ನಡೆಸಿದ ಗುರಿ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ದೃಢಪಡಿಸಿತು. ನಡೆಯುತ್ತಿರುವ ಮಾತುಕತೆಗಳ ಮಧ್ಯೆ ಹಾಲಿ ರಾಷ್ಟ್ರದ ಮುಖ್ಯಸ್ಥರ ಹತ್ಯೆಯು ಸಮಕಾಲೀನ ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಗಂಭೀರ ಬಿರುಕು ಮೂಡಿಸುತ್ತದೆ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ. ಇದನ್ನೂ ಓದಿ: ವರ್ಷಾನುಗಟ್ಟಲೆ ಟ್ರಾಫಿಕ್ ಕ್ಯಾಮೆರಾ ಹ್ಯಾಕ್, ಮೊಬೈಲ್ ನೆಟ್ವರ್ಕ್ ಟ್ರ್ಯಾಕ್ – ಖಮೇನಿ ಹತ್ಯೆಗೆ ಇಸ್ರೇಲ್ ರಣತಂತ್ರ ಹೇಗಿತ್ತು?
ವಿದೇಶಿ ನಾಯಕನ ಹತ್ಯೆಯು ನಮ್ಮ ದೇಶದಿಂದ ಸಾರ್ವಭೌಮತ್ವ ಅಥವಾ ಅಂತರರಾಷ್ಟ್ರೀಯ ಕಾನೂನಿನ ಸ್ಪಷ್ಟ ರಕ್ಷಣೆಯನ್ನು ಪಡೆಯದಿದ್ದಾಗ ಮತ್ತು ನಿಷ್ಪಕ್ಷಪಾತತೆಯನ್ನು ಕೈಬಿಟ್ಟಾಗ, ಅದು ನಮ್ಮ ವಿದೇಶಾಂಗ ನೀತಿಯ ನಿರ್ದೇಶನ ಮತ್ತು ವಿಶ್ವಾಸಾರ್ಹತೆಗೆ ಗಂಭೀರ ಅವಮಾನ ಮಾಡಿದಂತೆ ಎಂದು ಕೇಂದ್ರದ ವಿರುದ್ಧ ಗುಡುಗಿದ್ದಾರೆ.

