ನವದೆಹಲಿ: ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು (Military Conflict) ಪರಿಹಾರವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.
ಫಿನ್ಲ್ಯಾಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ (Alexander Stubb) ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋದಿ, ಮಿಲಿಟರಿ ಕಾರ್ಯಾಚರಣೆಗಳ ಬದಲಿಗೆ ರಾಜತಾಂತ್ರಿಕತೆಯ ಮೂಲಕ ಸಂಘರ್ಷಗಳನ್ನು ಪರಿಹರಿಸಬೇಕು ಎಂದರು.
ಭಾರತ ಮತ್ತು ಫಿನ್ಲ್ಯಾಂಡ್ ಎರಡೂ ಮಿಲಿಟರಿ ಸಂಘರ್ಷದ ಮೂಲಕ ಮಾತ್ರ ಯಾವುದೇ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ ಎನ್ನುವುದನ್ನು ಒಪ್ಪುತ್ತೇವೆ. ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾವಾಗಲಿ ಸಂಘರ್ಷ ತ್ವರಿತ ಅಂತ್ಯಕ್ಕಾಗಿ ನಾವು ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಯುದ್ಧದ ನಡುವೆ ವಿನಾಶಕಾರಿ ʻಡೂಮ್ಸ್‌ಡೇʼ ಕ್ಷಿಪಣಿ ಪರೀಕ್ಷಿಸಿದ ಅಮೆರಿಕ
Addressing the joint press meet with President Alexander Stubb of Finland. @alexstubb https://t.co/5EbPxNhi25
— Narendra Modi (@narendramodi) March 5, 2026
ಇಬ್ಬರು ನಾಯಕರ ಮಾತುಕತೆಯ ವೇಳೆ ಡಿಜಿಟಲೀಕರಣ ಮತ್ತು ಸುಸ್ಥಿರತೆಯಲ್ಲಿ ಕಾರ್ಯತಂತ್ರದ ಪಾಲುದಾರಿಕೆಯಾಗಿ ಭಾರತ-ಫಿನ್ಲ್ಯಾಂಡ್ ಸಂಬಂಧಗಳನ್ನು ಒಪ್ಪಿಕೊಳ್ಳಲು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ.
AI ನಿಂದ 6G ಟೆಲಿಕಾಂ ವರೆಗೆ, ಶುದ್ಧ ಇಂಧನದಿಂದ ಕ್ವಾಂಟಮ್ ಕಂಪ್ಯೂಟಿಂಗ್‌ವರೆಗೆ ಈ ಪಾಲುದಾರಿಕೆಯು ಅನೇಕ ಹೈಟೆಕ್ ಕ್ಷೇತ್ರಗಳಲ್ಲಿ ನಮ್ಮ ಸಹಕಾರಕ್ಕೆ ವೇಗ ಮತ್ತು ಶಕ್ತಿಯನ್ನು ನೀಡುತ್ತದೆ
ರತ-ಯುರೋಪಿಯನ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದವು ಭಾರತ ಮತ್ತು ಫಿನ್ಲ್ಯಾಂಡ್ ನಡುವಿನ ವ್ಯಾಪಾರ ಸಂಬಂಧಗಳನ್ನು ಬಲಪಡಿಸುತ್ತದೆ ಎಂದು ಮೋದಿ ಹೇಳಿದರು.

