ಜಗಳೂರು | ತೋಟಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು – 1500ಕ್ಕೂ ಹೆಚ್ಚು ಅಡಿಕೆ ಗಿಡಗಳು ಸುಟ್ಟು ಕರಕಲು

1 Min Read

ದಾವಣಗೆರೆ: ತೋಟಕ್ಕೆ ಕಿಡಿಗೇಡಿಗಳು ಬೆಂಕಿ (Fire) ಇಟ್ಟ ಪರಿಣಾಮ 1500ಕ್ಕೂ ಹೆಚ್ಚು ಅಡಿಕೆ ಗಿಡಗಳು ಸುಟ್ಟು ಕರಕಲಾದ ಘಟನೆ ಜಗಳೂರು (Jagalur ) ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ಅಡಿಕೆ ಗಿಡಗಳ ಜೊತೆ ಎರಡು ಲೋಡ್ ಮೆಕ್ಕೆಜೋಳದ ತೆನೆ ಕೂಡ ಸುಟ್ಟು ಕರಕಲಾಗಿದೆ.

ಓಬಳೇಶ್ ಎಂಬ ರೈತನಿಗೆ ಸೇರಿದ ಅಡಿಕೆ ಹಾಗೂ ಮೆಕ್ಕೆಜೋಳ ಬೆಳೆಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಸಾಲ ಮಾಡಿ ಅಡಿಕೆ ಗಿಡಗಳನ್ನು ನೆಟ್ಟಿದ್ದ ರೈತನಿಗೆ ಇದರಿಂದ ಬರ ಸಿಡಿಲು ಬಡಿದಂತಾಗಿದೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಗ್ರಾಮದ ರೈತರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: 9ನೇ ತರಗತಿ ವಿದ್ಯಾರ್ಥಿಯಿಂದ ರಾಡ್‌ನಿಂದ ಭೀಕರ ಹಲ್ಲೆ – ಓರ್ವ ಬಾಲಕ ಸಾವು, 7 ಮಂದಿಗೆ ಗಾಯ

ಕಳೆದ ಒಂದು ವರ್ಷದಲ್ಲಿ ಗ್ರಾಮದ ನಾಲ್ಕೈದು ಅಡಿಕೆ ತೋಟಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಜಗಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ರಾಮನಗರ | ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಮೂವರು ದುರ್ಮರಣ, ಮತ್ತೋರ್ವನ ಸ್ಥಿತಿ ಗಂಭೀರ

Share This Article