ಇರಾನ್‌-ಇಸ್ರೇಲ್‌ ಯುದ್ಧ; ಬೆಂಗಳೂರಿಗೆ ಆಗಮಿಸಬೇಕಿದ್ದ 9, ನಿರ್ಗಮಿಸಬೇಕಿದ್ದ 10 ವಿಮಾನಗಳು ರದ್ದು

1 Min Read

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ (Israel-Iran War) ಮತ್ತೆ ತೀವ್ರಗೊಂಡಿದ್ದು, ಮಧ್ಯಪ್ರಾಚ್ಯದ ಏರ್‌ಸ್ಪೇಸ್‌ಗೆ ನಿರ್ಬಂಧ ವಿಧಿಸಲಾಗಿದೆ. ಪರಿಣಾಮವಾಗಿ ಬೆಂಗಳೂರಿಗೆ (Be ಆಗಮಿಸಬೇಕಿದ್ದ 9 ಮತ್ತು ನಿರ್ಗಮಿಸಬೇಕಿದ್ದ 10 ವಿಮಾನಗಳ ಹಾರಾಟ ರದ್ದಾಗಿದೆ.

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಲ ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ, ದೋಹಾ ಮಾರ್ಗಗಳ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಖಮೇನಿ ಪುತ್ರ ಮೊಜ್ತಬಾ ನೂತನ ಸರ್ವೋಚ್ಚ ನಾಯಕ – ಇರಾನ್‌ನಿಂದ ಅಧಿಕೃತ ಘೋಷಣೆ

 

ಏರ್‌ಸ್ಪೇಸ್ ನಿರ್ಬಂಧ ಮತ್ತು ಭದ್ರತಾ ಕಾರಣದಿಂದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸಲು ವಿಮಾನ ನಿಲ್ದಾಣ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದರಿಂದ ಮಧ್ಯಪ್ರಾಚ್ಯಕ್ಕೆ ಹೋಗುವ ಪ್ರಯಾಣಿಕರಿಗೆ ತಾತ್ಕಾಲಿಕ ತೊಂದರೆ ಉಂಟಾಗುವ ಸಾಧ್ಯತೆ ಇದೆ.

Share This Article