ಟ್ರ್ಯಾಕ್ಟರ್‌ ಪಲ್ಟಿಯಾಗಿ ಸ್ಥಳದಲ್ಲೇ 13ರ ಬಾಲಕ ದುರ್ಮರಣ

1 Min Read

ಬೀದರ್: ಟ್ರ‍್ಯಾಕ್ಟರ್ ಪಲ್ಟಿಯಾಗಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ (Bhalki) ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ ನಡೆದಿದೆ.

ಬಾಜೋಳಗಾ ನಿವಾಸಿ ಶೋಹಮ್ (13) ಮೃತ ಬಾಲಕನಾಗಿದ್ದು, ಬಾಜೋಳಗಾ ಕ್ರಾಸ್‌ನಿಂದ ಡಿಸೇಲ್ ತುಂಬಿಸಲು ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಇರಾನ್ ಯುದ್ಧದಿಂದ ಭಾರತಕ್ಕೆ ಸಂಕಷ್ಟ – ಅಕ್ಕಿ ವರ್ತಕರಿಗೆ ರೈಸ್ ಮಿಲ್ ಮುಚ್ಚುವ ಭೀತಿ

ಮೃತ ಬಾಲಕ ಚನಲ್ಲಿ ಕುಳಿತಿದ್ದ. ಡಿಸೇಲ್ ತುಂಬಿಸಲು ಹೊರಟಿದ್ದಾಗ ಮದಕಟ್ಟಿ ಕ್ರಾಸ್ ಬಳಿ ಟ್ರ‍್ಯಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಬಾಲಕ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಖಟಕ್ ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article