ಬೆಂಗಳೂರು: 5 ಲಕ್ಷ ಲಂಚ (Bribe) ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರ (Lokayukta Police) ಕೈಗೆ ಸಿಕ್ಕಿಬಿದ್ದಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ (Chandru Lamani) ಷರತ್ತುಬದ್ಧ ಜಾಮೀನು (Bail) ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಾಸಕ ಚಂದ್ರು ಲಮಾಣಿ ಕಳೆದ 15 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಈ ಮಧ್ಯೆ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಚಂದ್ರು ಲಮಾಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಎರಡು ಲಕ್ಷ ರೂ. ವೈಯಕ್ತಿಕ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಒದಗಿಸುವ ಷರತ್ತಿನೊಂದಿಗೆ ನ್ಯಾಯಾಲಯ ಜಾಮೀನು ನೀಡಿ ಆದೇಶಿಸಿದೆ. ಇದನ್ನೂ ಓದಿ: ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ
ರಸ್ತೆ ಬದಿ ತಡೆಗೋಡೆ ನಿರ್ಮಾಣ ಸಂಬಂಧ 1 ಕೋಟಿ ಮೊತ್ತದ ಕಾಮಗಾರಿಗೆ ಶಾಸಕ ಚಂದ್ರು ಲಮಾಣಿ ಕ್ಲಾಸ್-1 ಗುತ್ತಿಗೆದಾರ ವಿಜಯ ಪೂಜಾರ ಎನ್ನುವವರ ಬಳಿ 11 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು. ಇದರ ಮೊದಲ ಹಂತದ ಹಣವಾಗಿ 5 ಲಕ್ಷ ರೂ. ಪಡೆಯುವಾಗಲೇ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಶಾಸಕರು ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು. ಇದನ್ನೂ ಓದಿ: ಭಾರತಕ್ಕೆ ಪ್ರಯಾಣಿಸುತ್ತಿದ್ದ ಥಾಯ್ ಸರಕು ಹಡಗಿನ ಮೇಲೆ ಇರಾನ್ ದಾಳಿ

