ಗಾಂಜಾ ಹೊಡೆದು ಗೋಕರ್ಣ ಬೀಚ್‌ಲ್ಲಿ ತೂರಾಡುತ್ತಿದ್ದ ಇಬ್ಬರು ಟೆಕ್ಕಿಗಳು ಅರೆಸ್ಟ್

1 Min Read

ಕಾರವಾರ: ಗಾಂಜಾ ಸೇವಿಸಿ ಗೋಕರ್ಣ ಕಡಲ ತೀರದಲ್ಲಿ ತೂರಾಡುತಿದ್ದ ಬೆಂಗಳೂರು ಮೂಲದ ಇಬ್ಬರು ಟೆಕ್ಕಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಎಂ.ಎಸ್. ಪವನ್ (28) ಹಾಗೂ ರಾಘು ಸೆಲ್ವರಂಗನ್ (30) ಬಂಧಿತ ಟೆಕ್ಕಿಗಳಾಗಿದ್ದಾರೆ. ಇಬ್ಬರು ಗೋಕರ್ಣದ ರುದ್ರಪಾದದ ಕರಿಯಪ್ಪನ ಕಟ್ಟೆ ಸಮೀಪದ ಬ್ಲೂ ಪೀನ್ ಬೀಚ್ ಸ್ಟೇಟ್ ರೆಸಾರ್ಟ್ ಎದುರಿನ ಸಮುದ್ರ ತೀರದಲ್ಲಿ ಅಮಲಿನಲ್ಲಿ ತೇಲಾಡುತ್ತಿದ್ದರು. ಈ ವೇಳೆ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಗ್ಯಾಸ್ ಟ್ರಬಲ್ – ಚನ್ನಪಟ್ಟಣದ ಮನೆಯಲ್ಲಿ ಸಿಲಿಂಡರ್ ಕಳ್ಳತನ

ವೈದ್ಯಕೀಯ ಪರೀಕ್ಷೆಯಲ್ಲಿ ಇಬ್ಬರು ಗಾಂಜಾ ಸೇವಿಸಿರುವುದು ಬೆಳಕಿಗೆ ಬಂದಿದೆ. ಟೆಕ್ಕಿಗಳ ವಿರುದ್ಧ ಎನ್‍ಡಿಪಿಎಸ್ ಕಾಯ್ದೆಯ ಕಲಂ 27(b) ಅಡಿಯಲ್ಲಿ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್

Share This Article