ಇರಾನ್‌ ಶೀಘ್ರವೇ ಶರಣಾಗಲಿದೆ ಎಂದ ಟ್ರಂಪ್‌ – ಕೊಲ್ಲಿ ಯುದ್ಧ ಅಂತ್ಯ?

1 Min Read

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರ ಒಂದು ಹೇಳಿಕೆಯಿಂದ ಕೊಲ್ಲಿ ಕದನ (US-Iran War) ಅಂತ್ಯವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.

ಜಿ7 ರಾಷ್ಟ್ರಗಳ ಜೊತೆಗಿನ ವರ್ಚುಯಲ್‌ ಸಭೆಯಲ್ಲಿ ಇರಾನ್‌ ಶೀಘ್ರವೇ ಶರಣಾಗಲಿದೆ ಎಂದು ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಯಾವಾಗ ಶರಣಾಗಬಹುದು? ಮತ್ತು ಯುದ್ಧ ಯಾವಾಗ ಕೊನೆಗೊಳ್ಳಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ವರದಿಯಾಗಿದೆ.

ಟ್ರಂಪ್‌ ಹೇಳಿಕೆಗೆ ಇರಾನ್‌ ಕಡೆಯಿಂದ ಯಾವುದೇ ಹೇಳಿಕೆ ಬಂದಿಲ್ಲ. ಅಮೆರಿಕದ ನೆಲೆಗಳು (USA Base) ಮತ್ತು ಮಧ್ಯಪ್ರಾಚ್ಯ ದೇಶಗಳ ಮೇಲೆ ನಡೆಯುತ್ತಿರುವ ದಾಳಿ ಕೊನೆಯಾಗಬೇಕಾದರೆ ನಮ್ಮ ಮೂರು ಷರತ್ತನ್ನುಗಳನ್ನು ಒಪ್ಪಿಕೊಳ್ಳಬೇಕೆಂದು ಇರಾನ್‌ ಗುರುವಾರ ಹೇಳಿತ್ತು.

ಇರಾನ್‌ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್(Masoud Pezeshkian) ಅವರು, ಇರಾನ್‌ನ ಕಾನೂನುಬದ್ಧ ಹಕ್ಕುಗಳನ್ನು ಗುರುತಿಸಬೇಕು. ಸಂಘರ್ಷದ ಸಮಯದಲ್ಲಿ ಉಂಟಾದ ಹಾನಿಗಳಿಗೆ ಪರಿಹಾರ ನೀಡಬೇಕು. ಭವಿಷ್ಯದಲ್ಲಿ ಆಕ್ರಮಣ ಮಾಡುವುದಿಲ್ಲ ಎಂದು ದೃಢವಾದ ಅಂತರರಾಷ್ಟ್ರೀಯ ಖಾತರಿಗಳನ್ನು ನೀಡಬೇಕು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ

ರಷ್ಯಾ ಮತ್ತು ಪಾಕಿಸ್ತಾನದ ನಾಯಕರ ಜೊತೆ ಮಾತನಾಡುವ ವೇಳೆ ನಾನು ಈ ವಿಚಾರಗಳ ಬಗ್ಗೆ ಮಾತನಾಡಿದ್ದೇನೆ. ಈ ಪ್ರದೇಶದಲ್ಲಿ ಶಾಂತಿಗೆ ಇರಾನ್‌ನ ಬದ್ಧತೆಯನ್ನು ನಾನು ಪುನರುಚ್ಚರಿಸಿದ್ದೇನೆ. ಜಿಯೋನಿಸ್ಟ್ ಆಡಳಿತ ಮತ್ತು ಅಮೆರಿಕ ಹೊತ್ತಿಸಿದ ಈ ಯುದ್ಧವನ್ನು ಕೊನೆಗೊಳಿಸಲು ಇರುವ ಏಕೈಕ ಮಾರ್ಗ ಇದು ಎಂದು ಬರೆದಿದ್ದಾರೆ.

Share This Article