ಕನ್ನಡಕ್ಕಾಗಿ ಕರವೇ ಪ್ರತಿಭಟನೆ – ರೈಲ್ವೇ ಪರೀಕ್ಷೆ ಮುಂದೂಡಿಕೆ

1 Min Read

ಬೆಂಗಳೂರು/ ಹುಬ್ಬಳ್ಳಿ: ರೈಲ್ವೆ ಇಲಾಖೆ ಪರೀಕ್ಷೆಗಳಲ್ಲಿ (Railway Exam) ಕನ್ನಡ ಭಾಷೆಗೆ (Kannada Language) ಅವಕಾಶ ನೀಡದಿರುವ ಕುರಿತು ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಗೂಡ್ಸ್ ರೈಲ್ವೆ ಮ್ಯಾನೇಜರ್ ಹಾಗೂ ಎಲ್‌ಡಿಸಿಇ ಹುದ್ದೆಗಳಿಗೆ ನಡೆಯುವ ಮುಂಬಡ್ತಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶವಿಲ್ಲದ ಕಾರಣ ಕನ್ನಡಿಗರಿಗೆ (Kannadigas) ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.

ಮೆಜೆಸ್ಟಿಕ್‌ನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ಕನ್ನಡ ವಿರೋಧಿ ಕೇಂದ್ರ ಸರ್ಕಾರಕ್ಕೆ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಕಾರರನ್ನ ಪೊಲೀಸರು ವಶಕ್ಕೆ ಪಡೆದರು. ಇದನ್ನೂ ಓದಿ: ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ


ಹುಬ್ಬಳ್ಳಿಯ ಕೇಶ್ವಾಪುರದ ಪರೀಕ್ಷಾ ಕೇಂದ್ರಕ್ಕೆ ಕರವೇ ಕಾರ್ಯಕರ್ತರು ತೆರಳಿ ಆಕ್ರೋಶ ಹೊರಹಾಕಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತು. ಕರವೇ ಪ್ರತಿಭಟನೆಗೆ ಮಣಿದ ರೈಲ್ವೆ ಇಲಾಖೆ ಪರೀಕ್ಷೆಯನ್ನು ಮೂಂದೂಡಿದೆ.

ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, ರೈಲ್ವೇ ಇಲಾಖೆಯು ದಿಢೀರನೇ ಪರೀಕ್ಷೆಯನ್ನ ರದ್ದುಪಡಿಸಿದೆ. ಇದರಿಂದ ಸಾವಿರಾರು ಉದ್ಯೋಗಾಕಾಂಕ್ಷಿ ಕನ್ನಡಿಗರನ್ನು ಅತಂತ್ರ ಪರಿಸ್ಥಿತಿಗೆ ತಳ್ಳಿದೆ. ರದ್ದುಪಡಿಸಲಾದ ರೈಲ್ವೇ ಇಲಾಖೆಯ ಉದ್ಯೋಗಭರ್ತಿ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಅವಕಾಶ ಕಲ್ಪಿಸಿ. ಶೀಘ್ರದಲ್ಲಿಯೇ ಪರೀಕ್ಷೆ ನಡೆಸಲು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Share This Article