ಕೆಲಸ ಮುಗಿಸಿ ಬರುವಾಗ ಸಿಡಿಲು ಬಡಿದು ರೈತ ಸಾವು

1 Min Read

ಗದಗ: ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಗದಗ (Gadag) ಜಿಲ್ಲೆಯ ರೋಣ (Rona) ತಾಲೂಕಿನ ಮೆಣಸಗಿ ಗ್ರಾಮದಲ್ಲಿ ನಡೆದಿದೆ.

58 ವರ್ಷದ ನಿಂಗಪ್ಪ ಅಮಾತ್ಯ ಮೃತ ರೈತ ಎಂದು ಗುರುತಿಸಲಾಗಿದ್ದು, ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದಾಗ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಆಲಿಕಲ್ಲು ಮಳೆಯಬ್ಬರ – ಅಲ್ಲಲ್ಲಿ ಕಾಶ್ಮೀರದಂತ ದೃಶ್ಯ ಸೆರೆ

ಮೃತ ವ್ಯಕ್ತಿ ಬೆಣ್ಣೆಹಳ್ಳ ಸಮೀಪದ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದAತೆ ಕೆಲಸ ಮುಗಿಸಿಕೊಂಡು ಮನೆಗೆ ಬರುವ ವೇಳೆ ಸಿಡಿಲು ಬಡಿದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರೋಣ ತಾಲೂಕಿನ ಹಲವೆಡೆ ಆಲಿಕಲ್ಲು, ಗುಡುಗು, ಸಿಡಿಲು ಸಹಿತ ಬಿರುಗಾಳಿ ಮಳೆಯಾಗಿದೆ.

ಬಿರುಗಾಳಿ ಮಳೆಗೆ ಅನೇಕ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ವರ್ಷಧಾರೆಗೆ ಜಿಲ್ಲೆಯಲ್ಲಿ ರೈತ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗದಗ ಜಿಲ್ಲೆ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೊದಲ ವರ್ಷಧಾರೆ – ಮುಂದಿನ 4 ದಿನ ರಾಜ್ಯಾದ್ಯಂತ ಮಳೆ

Share This Article