ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

2 Min Read

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್(Emmanuel Macron) ಜೊತೆ ಮಾತನಾಡಿದ್ದಾರೆ.

ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಉದ್ವಿಗ್ನತೆಯನ್ನು ಶಮನಗೊಳಿಸುವ ತುರ್ತು ಅಗತ್ಯತೆ ಹಾಗೂ ರಾಜತಾಂತ್ರಿಕತೆಗೆ ಮರಳುವ ಬಗ್ಗೆ ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತನಾಡಿದೆ ಎಂದು ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಈ ಪ್ರದೇಶಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಮುನ್ನಡೆಸಲು ನಮ್ಮ ನಿಕಟ ಸಮನ್ವಯವನ್ನು ಮುಂದುವರಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ಬರೆದಿದ್ದಾರೆ.

ಮ್ಯಾಕ್ರನ್ ಅಲ್ಲದೇ ಉದ್ವಿಗ್ನತೆಯನ್ನು ಶಮನಗೊಳಿಸುವ ನಿಟ್ಟಿನಲ್ಲಿ ಮಲೇಷ್ಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ, ಒಮಾನ್‌ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅಲ್ ಸೈದ್ ಅವರ ಜೊತೆ ಮೋದಿ ಮಾತನಾಡಿದ್ದಾರೆ.

Share This Article