ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು – ಗ್ರಾಮಸ್ಥರಿಂದ ಲಾಕಪ್‌ ಡೆತ್ ಆರೋಪ, ಠಾಣೆಗೆ ಬೀಗ ಜಡಿದು ಪ್ರತಿಭಟನೆ

1 Min Read

ತುಮಕೂರು: ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಹುಳಿಯಾರು (Huliyar) ಠಾಣೆಯಲ್ಲಿ ನಡೆದಿದೆ. ಪೊಲೀಸರ ಹಲ್ಲೆಯಿಂದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮೃತನನ್ನು ಕಾಂತರಾಜು (45) ಎಂದು ಗುರುತಿಸಲಾಗಿದೆ. ಇಸ್ಪೀಟ್ ಆಡ್ತಿದ್ದ 6 ಜನರನ್ನ ಪೊಲೀಸರು ಠಾಣೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಠಾಣೆಯಲ್ಲಿ ಕಾಂತರಾಜು ಸಾವನ್ನಪ್ಪಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಹುಳಿಯಾರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಠಾಣೆಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡು ಲಾಕಪ್‌ ಡೆತ್‌ ಕೇಸ್‌ – ಹಲ್ಲೆ ನಡೆಸಿದ್ದ ಪೊಲೀಸರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗ್ರಾಮಸ್ಥರಿಗೆ ಎಸ್‌ಪಿ ಅಶೋಕ್‌ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್ ಪ್ರಕರಣ – ಕ್ಷಮೆಯಾಚಿಸಿದ ಪೊಲೀಸ್ ಮುಖ್ಯಸ್ಥ

Share This Article