ಪವಿತ್ರ ರಂಜಾನ್ ಹಬ್ಬದಂದು ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು – 3 ಸಾವಿರ ಮಠಕ್ಕೆ ತೆರಳಿ ನಮನ

1 Min Read

ಹುಬ್ಬಳ್ಳಿ: ಪವಿತ್ರ ರಂಜಾನ್ ಹಬ್ಬವನ್ನು (Ramadan Festival) ವಾಣಿಜ್ಯ ನಗರದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ವಿವಾದಿತ ಈದ್ಗಾ ಮೈದಾನದಲ್ಲಿ ಲಕ್ಷಾಂತರ ಮುಸ್ಲಿಮರು ಏಕಕಾಲದಲ್ಲಿ ರಂಜಾನ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಹುಬ್ಬಳ್ಳಿಯ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಂಬೇಡ್ಕರ್, ಹೊಸೂರು, ಕಮರಿಪೇಟೆ ಸೇರಿದಂತೆ ಪ್ರಮುಖ ವೃತ್ತಿಗಳಲ್ಲಿ ಸಂಚಾರ ಬಂದ್ ಮಾಡಿ, ಪ್ರಾರ್ಥನೆಗೆ ಅನುವು ಮಾಡಿಕೊಡಲಾಗಿತ್ತು. ಪ್ರಾರ್ಥನೆ ಬಳಿಕ ಅಂಜುಮನ್ ಇಸ್ಲಾಮಿಕ್ ಸಂಸ್ಥೆಯ ಮುಖಂಡರು ಹಾಗೂ ಮುಸ್ಲಿಂ ಮುಖಂಡರು (Muslim Leaders) 3 ಸಾವಿರ ಮಠಕ್ಕೆ ತೆರಳಿ, ದೇವರ ದರ್ಶನ ಪಡೆದು ಭಾವೈಕ್ಯತೆ ಮೆರದರು. ಇದನ್ನೂ ಓದಿ: ದಾವಣಗೆರೆ ದಕ್ಷಿಣ: ಲಿಂಗಾಯತ v/s ಮುಸ್ಲಿಂ ಸಮುದಾಯ ನಾಯಕರ ನಡುವೆ ಕದನ – ಯಾರಿಗೆ ಟಿಕೆಟ್?

ಮಠದ ಪೀಠಾಧಿಪತಿ ಮೂಜಗು ಅನುಪಸ್ಥಿತಿಯಲ್ಲಿ, ಶಿವಮೊಗ್ಗ ಜಿಲ್ಲೆ ಆನಂದಪುರ ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀಗಳು ಮುಸ್ಲಿಂ ಭಕ್ತರಿಗೆ ಆರ್ಶೀವದಿಸಿ ಹಬ್ಬದ ಶುಭಕೋರಿದರು. ಇದನ್ನೂ ಓದಿ: ರಂಜಾನ್‌ ಸಂಭ್ರಮ: ಮುಸ್ಲಿಂ ಬಾಂಧವರ ಜೊತೆ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಭಾಗಿ 

Share This Article