ಶಿವೈಕ್ಯ ಶಿವಕುಮಾರ ಶ್ರೀಗಳ ಜಯಂತಿ – ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಮುರ್ಮು

1 Min Read

ತುಮಕೂರು: ಏ.1ರಂದು ಶಿವೈಕ್ಯ ಶಿವಕುಮಾರ ಶ್ರೀಗಳ ಜನ್ಮ ದಿನೋತ್ಸವದ ಹಿನ್ನೆಲೆ ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಆಗಮಿಸಲಿದ್ದಾರೆ.

ಮಾ.31ರಂದು ಸಂಜೆ ಬೆಂಗಳೂರಿಗೆ ಆಗಮಿಸಿ, ಅಂದು ರಾಜಭವನದಲ್ಲಿ ತಂಗಲಿದ್ದಾರೆ. ಮಾರನೇ ದಿನ ಏ.1ರಂದು ಬೆಳಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ (Siddaganga Mutt) ಆಗಮಿಸಲಿದ್ದಾರೆ. ಬಳಿಕ ಸಿದ್ದಗಂಗಾ ಶ್ರೀಗಳ ಗದ್ದಿಗೆ ದರ್ಶನ ಪಡೆದು ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಹೊಸ ಶಾಸಕರಿಗೂ ಸಂಪುಟದಲ್ಲಿ ಅವಕಾಶ ಬೇಕು, 55 ಶಾಸಕರು ಸಭೆ ಮಾಡಿ ಚರ್ಚೆ ಮಾಡಿದ್ದೇವೆ: ಇಕ್ಬಾಲ್ ಹುಸೇನ್

ಕಾರ್ಯಕ್ರಮದಲ್ಲಿ ಒಟ್ಟು ಒಂದೂವರೆ ಗಂಟೆಗಳ ಕಾಲ ಇರಲಿದ್ದಾರೆ ಎಂದು ಸಿದ್ದಗಂಗಾ ಮಠದಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ (V Somanna) ಮಾಹಿತಿ ನೀಡಿದ್ದಾರೆ.

Share This Article