ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

1 Min Read

– ಡ್ರಗ್ಸ್‌ ಸಾಗಿಸುತ್ತಿದ್ದ ಓರ್ವ ಸೇರಿ ಮೂವರು ಅರೆಸ್ಟ್‌

ಬೆಂಗಳೂರು: ನಗರದಲ್ಲಿ ಡಿಆರ್‌ಐ (DRI) ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಸುಮಾರು 9 ಕೋಟಿ ಮೌಲ್ಯದ ಡ್ರಗ್ಸ್‌ (Drugs Seize) ವಶಪಡಿಸಿಕೊಂಡಿದ್ದಾರೆ.

- Advertisement -

ನಾಯಿಗೆ ನೀಡುವ ಫುಡ್‌ ಪ್ಯಾಕೇಟ್‌ನಲ್ಲಿಟ್ಟು ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ (Rajadhani Express Train) ದೆಹಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ವೇಳೆ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಆರೋಪಿ ಹಾಗೂ ಆತನ ಸಂಪರ್ಕದಲ್ಲಿದ್ದ ಮತ್ತಿಬ್ಬರನ್ನೂ ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು

- Advertisement -

- Advertisement -

ಹೆಚ್ಚಿನ ವಿಚಾರಣೆ ನಡೆಸಿದಾಗ ಬೆಂಗಳೂರಿನಲ್ಲಿ ಮನೆಯಲ್ಲಿ 40 ಡೆಬಿಟ್ ಕಾರ್ಡ್, 70 ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ. ಇದನ್ನೂ ಓದಿ: ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

- Advertisement -

Share This Article