ಡಿಕೆಶಿ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ

1 Min Read

ಕೊಪ್ಪಳ: ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಆಪ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಕರಿಯಣ್ಣ ಸಂಗಟಿ (Kariyanna Sangati) (60) ಅವರು ವಿಧಿವಶರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕರಿಯಣ್ಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು (ಮಾ.23) ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಯುದ್ಧಪೀಡಿತ ಇರಾನ್‌ ಸಂತ್ರಸ್ತರಿಗೆ ಚಿನ್ನ, ಹಣ, ಬೆಲೆಬಾಳುವ ವಸ್ತುಗಳನ್ನು ದಾನ ನೀಡಿದ ಕಾಶ್ಮೀರ ಜನತೆ

ಮೂಲತಃ ಕೊಪ್ಪಳ ತಾಲೂಕಿನ ಯಲಮಗೇರಿ ನಿವಾಸಿಯಾಗಿರುವ ಕರಿಯಣ್ಣ ಸಂಗಟಿ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಪ್ತರಾಗಿದ್ದರು. ಅಲ್ಲದೇ ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು.

Share This Article