ಬೀದರ್: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಅಭಾವ ಹೆಚ್ಚಾಗಿದೆ. ಇದರ ಮಧ್ಯೆ ಬೀದರ್ (Bidar) ಜಿಲ್ಲೆಯ ಹುಲಸೂರ ತಾಲೂಕಿನ ಗೋರ್ಟಾ(ಬಿ) ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ 6 ಸಿಲಿಂಡರ್ಗಳು ಕಳ್ಳತನವಾಗಿದೆ.
ಕರ್ನಾಟಕ ಪಬ್ಲಿಕ್ ಶಾಲೆಯ ಅಡುಗೆ ಕೋಣೆಯ ಬೀಗ ಮುರಿದು ಗ್ಯಾಸ್ ತುಂಬಿದ್ದ 6 ಸಿಲಿಂಡರ್ಗಳನ್ನು ಕಳ್ಳತನ ಮಾಡಿ, ಖದೀಮರು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಈಗ 41 ದೇಶಗಳಿಂದ ಇಂಧನ ಅಮದು, ಗಲ್ಫ್ನಲ್ಲಿರುವ ಪ್ರತಿಯೊಬ್ಬ ಭಾರತೀಯನ ಸುರಕ್ಷತೆ ನಮಗೆ ಮುಖ್ಯ: ಮೋದಿ
ಇಂದು (ಮಾ.23) ಶಿಕ್ಷಕರು ಶಾಲೆಗೆ ಬಂದಾಗ ಅಡುಗೆ ಕೋಣೆಯ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ. ಒಳಗೆ ಹೋಗಿ ನೋಡಿದಾಗ ಸಿಲಿಂಡರ್ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಬಿಸಿಯೂಟ ಹಾಗೂ ಕ್ಷೀರಭಾಗ್ಯ ಯೋಜನೆಗಾಗಿ ತಂದಿದ್ದ ಗ್ಯಾಸ್ ಸಿಲಿಂಡರ್ಗಳೇ ಕಳ್ಳತನವಾಗಿದ್ದು, ಸದ್ಯ ಮಕ್ಕಳಿಗೆ ಬಿಸಿಯೂಟ ತಯಾರಿಸಲು ತೊಂದರೆಯುಂಟಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಸವಕಲ್ಯಾಣ (Basava Kalyana) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ: LPG ಬಿಕ್ಕಟ್ಟು: 14 ಕೆಜಿ ಬದಲಿಗೆ 10 ಕೆಜಿ ಎಲ್ಪಿಜಿ ಪೂರೈಕೆಗೆ ಕೇಂದ್ರ ಚಿಂತನೆ

