ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ – 66 ಮಂದಿ ಸಾವು

1 Min Read

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯಲ್ಲಿ ಪತನಗೊಂಡು ಕನಿಷ್ಠ 66 ಜನರು ಸಾವನ್ನಪ್ಪಿದ ಘಟನೆ ಕೊಲಂಬಿಯಾದಲ್ಲಿ(Colombia) ನಡೆದಿದೆ.

ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ-130 ವಿಮಾನ ಪೆರುವಿನ (Peru) ಗಡಿಯಲ್ಲಿರುವ ಪೋರ್ಟೊ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಕೊಲಂಬಿಯಾದ ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ತಿಳಿಸಿದ್ದಾರೆ.


ನಗರ ಕೇಂದ್ರದಿಂದ ಕೇವಲ 3 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ. ದುರಂತದಲ್ಲಿ 48 ಜನರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಸ್ಥಳಾಂತರಿಸಲು ಪ್ರಯತ್ನಗಳು ನಡೆಯುತ್ತಿವೆ. ಅಧಿಕಾರಿಗಳು ಅಪಘಾತದ ಕಾರಣವನ್ನು ತನಿಖೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಅಮೆರಿಕದ ರಿಫೈನರಿಯಲ್ಲಿ ಭಾರೀ ಸ್ಫೋಟ – ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ

ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ವಿಮಾನದಲ್ಲಿದ್ದ 40 ಕ್ಕೂ ಹೆಚ್ಚು ಜನರ ಸ್ಥಿತಿಯನ್ನು ಇನ್ನೂ ದೃಢಪಡಿಸಲಾಗಿಲ್ಲ ಎಂದು ತಿಳಿಸಿದ್ದಾರೆ.
Share This Article