ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

1 Min Read

ಶಿವಮೊಗ್ಗ: ಆಗುಂಬೆ ಘಾಟಿಯ (Agumbe Ghat) 4ನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದ ಪರಿಣಾಮ ವಾಹನ ಸಂಚಾರ ಬಂದ್ ಆಗಿದೆ.

ಇದರಿಂದ ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುತ್ತಿದ್ದ ವಾಹನಗಳು ಘಾಟಿಯ ಎರಡು ಕಡೆ ಟ್ರಾಫಿಕ್ ಜಾಮ್ ಆಗಿವೆ. ಮರ ಸಂಪೂರ್ಣ ರಸ್ತೆಗೆ ಬಿದ್ದಿರುವ ಪರಿಣಾಮ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದನ್ನೂ ಓದಿ: ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ

ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಇನ್ನೂ ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಘಾಟ್ ನಲ್ಲಿ ಓಡಾಟ ನಡೆಸುತ್ತಿದ್ದ ಲಾರಿ ಚಾಲಕರು ಮರ ತೆರವಿಗೆ ಪ್ರಯತ್ನ ಪಡುತ್ತಿದ್ದು ದೊಡ್ಡ ಮರ ಆಗಿರುವುದರಿಂದ ಮರ ತೆರವಿನ ಕಾರ್ಯ ಅಷ್ಟು ಸುಲಭ ಅಲ್ಲ ಎಂದು ಹೇಳಲಾಗುತ್ತಿದೆ.

ಸದ್ಯದ ಮಾಹಿತಿ ಪ್ರಕಾರ, ಕೆಲವು ಗಂಟೆಗಳ ಕಾಲ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು – ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ

Share This Article