ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

1 Min Read

ರಾಯಚೂರು: ತುಂಗಭದ್ರಾ ನದಿಗೆ (Tungabhadra River) ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ (Andhra Pradesh) ಕೊಸಗಿ ಮಂಡಲದ ಕಂದಕೂರು ಬಳಿ ನಡೆದಿದೆ.

ಮಾನ್ವಿ (Manvi) ತಾಲೂಕಿನ ಕುರ್ಡಿ ಗ್ರಾಮದ ದಾಸರಿ ಉಮಾವತಿ (35), ದಾಸರಿ ರತ್ನಮ್ಮ (26) ಮಹೇಶ (24) ಮತ್ತು ಶಿವಾನಂದ (28) ಮೃತ ದುರ್ದೈವಿಗಳು. ಸಂಬಂಧಿಕರ ಮದುವೆಗೆ ತೆರಳಿದ್ದವರು ಮಧ್ಯಾಹ್ನ ಸ್ನಾನಕ್ಕೆ ನದಿಗೆ ಇಳಿದಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

ಆಂಧ್ರಪ್ರದೇಶ ಕರ್ನಾಟಕ ಗಡಿ ಭಾಗದ ರಾಜೊಳ್ಳಿಬಂಡಾ ಆಣೆಕಟ್ಟಿನ ಕೊನೆ ಭಾಗದ ಬಳಿ ಈ ಘಟನೆ ನಡೆದಿದೆ. ಆಂಧ್ರದ ಕರ್ನೂಲು ಜಿಲ್ಲೆಯ ಕೊಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಸ್ಥಳೀಯ ಮೀನುಗಾರರ ಸಹಾಯದಿಂದ ಶವಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಕೊಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಕುರ್ಡಿ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Share This Article