ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ನಡ್ವೆ ಭೀಕರ ಅಪಘಾತ; ತಪ್ಪಿದ ದುರಂತ

1 Min Read

ಹಾಸನ: ನಗರದ ಎಂ.ಜಿ ರಸ್ತೆಯಲ್ಲಿ ಇಂದು ಮುಂಜಾನೆ ಡೀಸೆಲ್‌ ಟ್ಯಾಂಕರ್‌ (Diesel Tanker) ಹಾಗೂ ಕಾರಿನ ನಡುವೆ ಭೀಕರ ಅಪಘಾತ (Accident) ಸಂಭವಿಸಿದ್ದು, ಭಾರೀ ದುರಂತವೊಂದು ತಪ್ಪಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಟ್ಯಾಂಕರ್‌ನಲ್ಲಿ ಸಣ್ಣ ಪ್ರಮಾಣದಲ್ಲಿ ಡೀಸೆಲ್‌ ಸೋರಿಕೆಯಾಗಿರುವುದು ಕಂಡುಬಂದಿದೆ. ಆದ್ರೆ ಅಗ್ನಿಶಾಮಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಮುಂದಾಗುವ ಅನಾಹುತ ತಪ್ಪಿದೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲಿ ಪತಿ ಸೂಸೈಡ್ – ಪತ್ನಿಯ ಕಿರುಕುಳಕ್ಕೆ ಮನನೊಂದು ಆತ್ಯಹತ್ಯೆ ಆರೋಪ

ಇನ್ನೂ ಟ್ಯಾಂಕರ್‌ ಡಿಕ್ಕಿಯಿಂದ ಕಾರಿನ ಒಂದು ಬದಿ ನಜ್ಜುಗುಜ್ಜಾಗಿದ್ದು, ರಸ್ತೆಯ ಇನ್ನೊಂದು ಬದಿಗೆ ಹಾರಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನಗರ ಸಂಚಾರ ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಇದನ್ನೂ ಓದಿ: ಆರ್ಟೆಮಿಸ್-2 ಪಯಣಕ್ಕೆ ಕೌಂಟ್‌ಡೌನ್ – ಉಡಾವಣೆಗೂ ಮುನ್ನ ಸೂರ್ಯನ ಮೇಲೆ ನಾಸಾ ಕಣ್ಣಿಟ್ಟಿದ್ದು ಯಾಕೆ? ಮಿಷನ್‌ ಉದ್ದೇಶ ಏನು?

Share This Article