ಧಾರವಾಡ: ಮನೆಯಲ್ಲಿ ಸಂಗ್ರಹ ಮಾಡಿದ್ದ ಪೆಟ್ರೋಲ್ (Petrol Storage) ಕ್ಯಾನ್ಗೆ ಬೆಂಕಿ ತಗುಲಿದ ಪರಿಣಾಮ ಗೃಹಿಣಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಧಾರವಾಡ (Dharwad) ತಾಲೂಕಿನ ತಡಕೋಡ ಗ್ರಾಮದ ಹರಿಜನಕೇರಿ ಓಣಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಪೂರ್ಣಿಮಾ ಕಲ್ಲಪ್ಪ ಹಾದಿಮನಿ (32) ಎಂಬ ಗೃಹಿಣಿಯೇ ತೀವ್ರವಾಗಿ ಗಾಯಗೊಂಡಿದ್ದು, ಶೇ.80 ರಷ್ಟು ದೇಹ ಸುಟ್ಟಿರುವ ಕಾರಣ ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಡೀಸೆಲ್ ಟ್ಯಾಕರ್ – ಕಾರಿನ ನಡ್ವೆ ಭೀಕರ ಅಪಘಾತ; ತಪ್ಪಿದ ದುರಂತ
ಪೂರ್ಣಿಮಾ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ಗೆ ವಾನಿಸಲಾಗಿದೆ. ಪೆಟ್ರೋಲ್ ಅಭಾವ ಆಗಿದೆ ಎಂಬ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಪೆಟ್ರೋಲ್ನ್ನು ಕ್ಯಾನ್ನಲ್ಲಿ ಸಂಗ್ರಹಿಸಿ, ಮನೆಯ ಫ್ರಿಡ್ಜ್ ಬಳಿ ಇಡಲಾಗಿತ್ತು. ಪೂರ್ಣಿಮಾ ಅಡುಗೆ ಮನೆಯಲ್ಲಿದ್ದಾಗ ಏಕಾಏಕಿ ಕ್ಯಾನ್ಗೆ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡಿದ್ದು, ಇಡೀ ಮನೆಗೆ ಬೆಂಕಿ ಆವರಿಸಿದೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲಿ ಪತಿ ಸೂಸೈಡ್ – ಪತ್ನಿಯ ಕಿರುಕುಳಕ್ಕೆ ಮನನೊಂದು ಆತ್ಯಹತ್ಯೆ ಆರೋಪ
ಅಡುಗೆ ಮನೆಯಲ್ಲಿ ಸಿಲುಕಿದ್ದ ಅತ್ತಿಗೆಯನ್ನು ಮೈದುನ ಯಲ್ಲಪ್ಪ ಕಾಪಾಡಿದ್ದು, ಈ ವೇಳೆ ಅವನಿಗೂ ಗಾಯಗಳಾಗಿವೆ. ಆದರೆ ಮಹಿಳೆಯ ಸ್ಥಿತಿ ಮಾತ್ರ ಗಂಭೀರವಾಗಿದೆ. ಈ ವೇಳೆ ಮನೆಯ ಸದಸ್ಯರ ಹೊರಗಡೆ ಕುಳಿತಿದ್ದರಿಂದ ಪಾರಾಗಿದ್ದಾರೆ. ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಮದುವೆ ಕಾರ್ಯಕ್ರಮಗಳಿಗೆ ರಥ ಒಡಿಸೊದಕ್ಕೆ ಇವರು ಪೆಟ್ರೋಲ್ ಸ್ಟಾಕ್ ಮಾಡಿದ್ದರು ಎಂದು ತಿಳಿದು ಬಂದಿದೆ. ಸದ್ಯ ಗರಗ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.


