ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ – ಪಕ್ಕದ ರಸ್ತೆಗೆ ಉರುಳಿಬಿದ್ದ ಕಾರು

1 Min Read

ರಾಮನಗರ: ಚಲಿಸುತ್ತಿದ್ದ ಕಾರಿಗೆ (Car) ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿಯಾಗಿ ಪಕ್ಕದ ರಸ್ತೆಗೆ ಕಾರು ಉರುಳಿಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ(Bengaluru-Mysuru Expressway) ಸಂಭವಿಸಿದೆ.

ಮೈಸೂರಿನಿಂದ ಬೆಂಗಳೂರು ಕಡೆ ಹೋಗ್ತಿದ್ದ ಕಾರುಗಳ ನಡುವೆ ಅಪಘಾತ ನಡೆದಿದೆ. ಮುಂದೆ ಹೋಗುತ್ತಿದ್ದ ಟಾಟಾ ಇಂಡಿಕಾ ಕಾರಿಗೆ ಪೋಲೊ ಕಾರು ಹಿಂಬದಿಯಿಂದ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಇಂಡಿಕಾ ಕಾರು ಪಕ್ಕದ ರಸ್ತೆಗೆ ಉರುಳಿಬಿದ್ದಿದೆ.  ಇದನ್ನೂ ಓದಿ: ಹೆಚ್ಚಾದ ಬಿಸಿಲು – ಉ.ಕರ್ನಾಟಕದ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

 

ಸದ್ಯ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಇದನ್ನೂ ಓದಿ: ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

Share This Article