ಬೆಂಗಳೂರು/ಬಾಗಲಕೋಟೆ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ವಿರುದ್ಧ ರಾಜ್ಯ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ (Election Commission) ದೂರು ಸಲ್ಲಿಸಿದೆ.
ಶಾಸಕ ಸಿಕೆ ರಾಮಮೂರ್ತಿ ನೇತೃತ್ವದ ನಿಯೋಗವು ಶಾಸಕ ಪ್ರದೀಪ್ ಈಶ್ವರ್ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ನುಗ್ಲಿ ವಿರುದ್ಧ ದೂರು ದಾಖಲಿಸಿದೆ. ಇದನ್ನೂ ಓದಿ: ಸಾಧು ಪರಂಪರೆಯ ಆಧ್ಯಾತ್ಮಿಕತೆಯಲ್ಲಿ ಶಿವಕುಮಾರ ಶ್ರೀಗಳು ಮೇಲ್ಪಂಕ್ತಿಯಲ್ಲಿರುತ್ತಾರೆ – ರಾಷ್ಟ್ರಪತಿ ಮುರ್ಮು
ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದು, ಈ ಹಿನ್ನೆಲೆ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಪ್ರದೀಪ್ ಈಶ್ವರ್ ಒಬ್ಬ ಹುಚ್ಚ. ನಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ಸಂವಿಧಾನ ವಿರೋಧಿ. ಹೀಗಾಗಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದೇವೆ ಎಂದು ಶಾಸಕ ಸಿಕೆ ರಾಮಮೂರ್ತಿ ಹೇಳಿದ್ದಾರೆ.
ಇನ್ನು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಂದ್ರಶೇಖರ್ ನುಗ್ಲಿ ಹಾಗೂ ಇತರ ಶಿಕ್ಷಕರು ಪ್ರಚಾರ ನಡೆಸಿದ್ದರು. ಸರ್ಕಾರಿ ನೌಕರರಾಗಿದ್ದು ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿದ್ದಕ್ಕೆ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಚಂದ್ರಶೇಖರ್ ನುಗ್ಲಿ ಎಂಬ ಶಿಕ್ಷಕ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ತಕ್ಷಣ ಅವರನ್ನು ನೌಕರಿಯಿಂದ ವಜಾ ಮಾಡಬೇಕು ಎಂದು ಬಿಜೆಪಿ ಮುಖಂಡ ಎಸ್.ಹರೀಶ್ ಒತ್ತಾಯಿಸಿದ್ದಾರೆ.

