ದೂತ ಎಂಡಿ ಸಮೀರ್‌ಗೆ ಹೈಕೋರ್ಟ್ ಫುಲ್ ಕ್ಲಾಸ್

1 Min Read

ಬೆಂಗಳೂರು: ಧರ್ಮಸ್ಥಳದ(Dharmasthala) ಅಸಹಜ ಸಾವುಗಳ ಕುರಿತು ವಿಡಿಯೋ ಮಾಡಿದ್ದ ಎಂ.ಡಿ. ಸಮೀರ್(MD Sameer) ವಿರುದ್ಧದ ಪೊಲೀಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ (High Court) ತಡೆಯಾಜ್ಞೆ ನೀಡಿ ತರಾಟೆಗೆ ತೆಗೆದುಕೊಂಡಿದೆ

ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಎಂ.ಡಿ. ಸಮೀರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ನ್ಯಾಯಪೀಠದ ಕಟು ವಿಮರ್ಶೆ ಮಾಡಿದ್ದು, ನಿಮ್ಮ ಕಕ್ಷಿದಾರರು ಸುಮ್ಮನೆ ಇರುವುದಕ್ಕೆ ಆಗುವುದಿಲ್ವೇ? ಈ ರೀತಿ ವಿಡಿಯೋ ಮಾಡಿ ಬೇರೆಯವರ ನೆಮ್ಮದಿಯನ್ನು ಹಾಳು ಮಾಡುತ್ತೀರಿ ಎಂದು ಸಮೀರ್‌ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತು. ಇದನ್ನೂ ಓದಿ: West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

 

ಪ್ರಾಸಿಕ್ಯೂಟರ್ ವಾದ ಮಾಡಿ, ಕೃತಕ ಬುದ್ದಿಮತ್ತೆ ನೆರವಿನಿಂದ ಸಮೀರ್ ವಿಡಿಯೊ ಮಾಡಿದ್ದಾರೆ. ಕೆಲವು ಶವಗಳನ್ನು ಅಲ್ಲಿ ಹೂಳಲಾಗಿದ್ದು, ಕೆಲವನ್ನು ಅಲ್ಲಿ ಸಂಸ್ಕಾರ ಮಾಡಲಾಗಿದೆ ಎಂದು ತೋರಿಸಲಾಗಿದೆ. ಈ ರೀತಿಯ ಪ್ರಕ್ರಿಯೆಗಳನ್ನು ಸಂಪೂರ್ಣವಾಗಿ ನೀವು ಮುಕ್ತಾಯ ಮಾಡಿಕೊಳ್ಳಬೇಕು. ಅನಗತ್ಯವಾಗಿ ಈ ಪ್ರಕರಣಗಳನ್ನು ವಿಸ್ತರಿಸಬೇಡಿ ಎಂದು ಮನವಿ ಮಾಡಿದರು.

ಈ ರೀತಿ ವಿಡಿಯೋಗಳು ಇನ್ನು ಮುಂದೆ ಮಾಡುವುದಿಲ್ಲ ಎಂದು ಅಫಿಡವಿಟ್ ಹಾಕಬೇಕು ಎಂದು ಅರ್ಜಿದಾರ ಪರ ವಕೀಲರಿಗೆ ಸೂಚನೆ ನೀಡಿದ ಹೈಕೋರ್ಟ್‌ ವಿಚಾರಣೆಯನ್ನು ಏಪ್ರಿಲ್ 22ಕ್ಕೆ  ಮುಂದೂಡಿದೆ.

Share This Article