ಬೆಂಗಳೂರು: ಬೇಸಿಗೆ ರಜೆಯ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ನೈಋತ್ಯ ರೈಲ್ವೆಯು ಬೆಂಗಳೂರು ಕಂಟೋನ್ಮೆಂಟ್ ಮತ್ತು ಡಾ. ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ (Bengaluru Cantonment-Chennai) ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆಯನ್ನು ಓಡಿಸಲಿದೆ.
ರೈಲು ಸಂಖ್ಯೆ 06545 ಬೆಂಗಳೂರು ಕಂಟೋನ್ಮೆಂಟ್ – ಡಾ. ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್ಪ್ರೆಸ್ ರೈಲು ಏಪ್ರಿಲ್ 9 ರಂದು ಬೆಳಗ್ಗೆ 08:05ಕ್ಕೆ ಬೆಂಗಳೂರು ಕಂಟೋನ್ಮೆಂಟ್ನಿಂದ ಹೊರಟು, ಅಂದು ಮಧ್ಯಾಹ್ನ 3 ಗಂಟೆಗೆ ಡಾ. ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ. ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06546 ಡಾ. ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ – ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ಪ್ರೆಸ್ ರೈಲು ಏಪ್ರಿಲ್ 9 ರಂದು ಸಂಜೆ 04:45ಕ್ಕೆ ಚೆನ್ನೈ ಸೆಂಟ್ರಲ್ನಿಂದ ಹೊರಟು, ಅಂದು ರಾತ್ರಿ 11 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ಆಗಮಿಸಲಿದೆ. ಇದನ್ನೂ ಓದಿ: ಏ.5ರಂದು 2 ಗಂಟೆಗಳ ಕಾಲ `ನಮ್ಮ ಮೆಟ್ರೋ’ ಸೇವೆ ಸ್ಥಗಿತ
ಈ ವಿಶೇಷ ರೈಲು ಒಟ್ಟು 21 ಬೋಗಿಗಳನ್ನು ಒಳಗೊಂಡಿರಲಿದೆ: 4 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು, 15 ಸ್ಲೀಪರ್ ಕ್ಲಾಸ್ ಬೋಗಿಗಳು & 2 ಎಸ್ಎಲ್ಆರ್/ಡಿ ಬೋಗಿಗಳು. ಈ ರೈಲು ಮಾರ್ಗ ಮಧ್ಯೆ ಕೃಷ್ಣರಾಜಪುರಂ, ಬಂಗಾರಪೇಟೆ, ಕುಪ್ಪಂ, ಜೋಲಾರ್ಪೇಟೆ, ಕಾಟ್ಪಾಡಿ, ಶೋಲಿಂಗರ್, ಅರಕ್ಕೋಣಂ, ತಿರುವಳ್ಳೂರು ಮತ್ತು ಪೆರಂಬೂರ್ ನಿಲ್ದಾಣಗಳಲ್ಲಿ ನಿಲ್ಲಲಿದೆ. ರೈಲು ಸಂಖ್ಯೆ 06546 (ಚೆನ್ನೈ – ಬೆಂಗಳೂರು) ಮರುಪ್ರಯಾಣದ ಸಮಯದಲ್ಲಿ ಪೆರಂಬೂರ್ ನಿಲ್ದಾಣದಲ್ಲಿ ನಿಲುಗಡೆಯನ್ನು ಹೊಂದಿರುವುದಿಲ್ಲ.

