ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೊರಟಿದ್ದ ಮಹಿಳೆ ನಾಪತ್ತೆ

1 Min Read

ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ (Tadiandamol Peak) ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ತಿಳಿದುಬಂದಿದೆ.

ಶರಣ್ಯ (36) ಶರಣ್ಯ ನಾಪತ್ತೆಯಾದ ಮಹಿಳೆಯಾಗಿದ್ದು, ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದು, ಅಲ್ಲಿಂದ ಟ್ರೆಕ್ಕಿಂಗ್‌ (Trekking) ಹೊರಟಿದ್ದರು ಎಂದು ಹೇಳಲಾಗಿದೆ. ಇದನ್ನೂ ಓದಿ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯಕ್ಕೆ ಮತ್ತೆ ಬೆಂಕಿ – 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿ

ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಿ ಬಂದಿದ್ದ ಶರಣ್ಯ ಒಬ್ಬರೇ ಬಂದಿದ್ದರು. ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಇರುವುದರಿಂದ ಬೇರೆ ಪ್ರವಾಸಿಗರ ಜೊತೆಯಲ್ಲಿ ಕಳುಹಿಸಲಾಗಿದೆ. ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ಹಿಂತಿರುಗಿ ಬಾರದ ಕಾರಣ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ವಿಷಯ ತಿಳಿಸಿದ್ದಾರೆ. ಇದನ್ನೂ ಓದಿ: ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ಶೆರ್ಪಾಗಳಿಂದ `ವಿಷ’

ಈ ಬಗ್ಗೆ ಅಲ್ಲಿಯ ಸ್ಥಳೀಯ ನಿವಾಸಿ ಕುಡಿಯರ ಮುತ್ತಪ್ಪ ಎಂಬವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಅರಣ್ಯ ಇಲಾಖೆಯವರು ಹಾಗೂ ಪೊಲೀಸರು, ಗ್ರಾಮಸ್ಥರು ಬೆಟ್ಟದಲ್ಲೆಲ್ಲ ಹುಡುಕಾಡಿದರೂ ಮಹಿಳೆಯ ಸುಳಿವು ದೊರೆತಿಲ್ಲ. ಇಂದು ಮತ್ತೆ ಮಹಿಳೆಗಾಗಿ ಶೋಧ ನಡೆಸಲಾಗುತ್ತಿದೆ. ಮಹಿಳೆಯ ಮೊಬೈಲ್ ಕೇರಳ ನೆಟ್ವರ್ಕ್‌ನಲ್ಲಿರುದಾಗಿ ತಿಳಿದು ಬಂದಿದ್ದು, ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ, ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬೆಟ್ಟದ ಪ್ರದೇಶದಲ್ಲಿ ಬೀಡುಬಿಟ್ಟಿದ್ದಾರೆ.

Share This Article