POCSO Act – ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್

1 Min Read

ಬೆಂಗಳೂರು: ಪೋಕ್ಸೋ ಕಾಯ್ದೆಯಡಿ (POCSO Act) ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣದ ಕುರಿತು ಆರೋಗ್ಯ ಇಲಾಖೆ (Deparment of Health) ಮಾರ್ಗಸೂಚಿ ಪ್ರಕಟ ಮಾಡಿದೆ.

ಕಡ್ಡಾಯವಾಗಿ ವರದಿ ಮತ್ತು ಕ್ರಮದ ಬಗ್ಗೆ ಮಾರ್ಗಸೂಚಿ ಪ್ರಕಟ ಮಾಡಿದ್ದು, ಎಲ್ಲಾ ಆಸ್ಪತ್ರೆಗಳು ಈ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.ಇದನ್ನೂ ಓದಿ: ಕೇಂದ್ರದಿಂದ ಯೂಟರ್ನ್‌ – ವಿಮಾನಗಳಲ್ಲಿ 60% ಸೀಟು ಉಚಿತ ಆಯ್ಕೆ ನಿಯಮಕ್ಕೆ ತಾತ್ಕಾಲಿಕ ತಡೆ

ನಿಯಮಗಳೇನು?

  • ಪೋಕ್ಸೋ ಪ್ರಕರಣದ ವಿವರಗಳನ್ನು ಸೂಕ್ತವಾಗಿ ದಾಖಲಿಸಬೇಕು.
  • ವೈದ್ಯಕೀಯ ದಾಖಲೆಗಳನ್ನು ಕಾನೂನುಬದ್ಧವಾಗಿ ಸಂಗ್ರಹಿಸಬೇಕು.
  • ರೋಗಿಯ ಗೌಪ್ಯತೆಯನ್ನು ಕಾಪಾಡಬೇಕು.
  • ತನಿಖಾಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಬೇಕು.
  • ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ ವೈದ್ಯರು ಮತ್ತು ಸಿಬ್ಬಂದಿಗೆ POCSO ಕಾಯಿದೆಯ ವಿಧಿ-ನಿಯಮಗಳ ಬಗ್ಗೆ ಜಾಗೃತಿ ಮೂಡಿಸಬೇಕು.
  • ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಕ್ರಮ ಕೈಗೊಳ್ಳಬೇಕು.

Share This Article