ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್‌ ಜಿಹಾದ್‌ ಕೇಸ್‌ – 14 ದಿನ ನ್ಯಾಯಾಂಗ ಬಂಧನಕ್ಕೆ ಮುಫೀಸ್

1 Min Read

ಹುಬ್ಬಳ್ಳಿ: ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ (Love Jihad Case) ತಡವಾಗಿ ಬೆಳಕಿಗೆ ಬಂದಿದೆ. ಮುಸ್ಲಿಂ ಯುವಕ ಮುಫೀಸ್ ಮಿಯಾನ್ನವರ್ ಪ್ರೀತಿಸುವ ನಾಟಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ಧಾನೆಂದು ಹಿಂದೂ ಮರಾಠ ಯುವತಿ ಕೊಟ್ಟ ದೂರು ಆಧರಿಸಿ ಹುಬ್ಬಳ್ಳಿ ಪೊಲೀಸರು (Hubballi Police) ಬಂಧಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ರು. ಆರೋಪಿ ಮುಫೀಸ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರೀತಿಸುವ ನಾಟಕವಾಡಿ, ಲೈಂಗಿಕ ದೌರ್ಜನ್ಯ ಎಸಗಿದ ಕಿರಾತಕ ಬಳಿಕ ಧಾರವಾಡದಲ್ಲಿ ರಿಜಿಸ್ಟರ್ ಮದುವೆ ಆಗಲು ತಯಾರಿ ನಡೆಸಿದ್ದ. ಅಷ್ಟರಲ್ಲಿ ವಿಷಯ ತಿಳಿದ ಯುವತಿ ಕುಟುಂಬಸ್ಥರು ಮದುವೆ ನಿಲ್ಲಿಸಿದ್ದಾರೆ. ಇದಾದ ಬಳಿಕ ಮುಫೀಸ್ ಯುವತಿಗೆ ಬ್ಲ್ಯಾಕ್ ಮೇಲ್ ಮಾಡೋಕೆ ಶುರು ಮಾಡಿದ್ದಾನೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್‌ – ಹಿಂದೂ ಯುವತಿ ಮೇಲೆ ಅತ್ಯಾಚಾರ ಆರೋಪ

ತನ್ನ ಖಾಸಗಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೇ ಯುವತಿ ಮನೆಯಲ್ಲಿ ಒಂಟಿಯಾಗಿದ್ದಾಗ, ಮನೆಗೇ ನುಗ್ಗಿ ಅತ್ಯಾಚಾರ ಮಾಡಿದ್ದಾನೆ. ಈ ವಿಷಯ ಯಾರಿಗಾದ್ರೂ ತಿಳಿಸಿದ್ರೆ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಯುವತಿ ದೂರು ನೀಡಿದ್ದಾರೆ. ಯುವತಿ ದೂರು ಆಧರಿಸಿ ಆರೋಪಿ ಮುಫೀಸ್ ಮಿಯಾನ್ನವರ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇದನ್ನೂ ಓದಿ: ಬಗೆದಷ್ಟು ಬಯಲಾಗ್ತಿದೆ ಜಿಮ್ ಟ್ರೈನರ್ ಬಂಡವಾಳ – 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಸಮೀರ್

Share This Article