ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

1 Min Read

– ಪತ್ನಿ, ಅತ್ತೆ, ಮಾವ ಪೊಲೀಸ್ ವಶಕ್ಕೆ

ಬೆಂಗಳೂರು: ಚಾಕುವಿನಿಂದ ಇರಿದು ಹೆಂಡತಿಯೇ ಗಂಡನ ಕೊಲೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದ (Annapoorneshwari Nagar) ಮಲ್ಲತ್ತಹಳ್ಳಿಯಲ್ಲಿ (Mallathahalli) ನಡೆದಿದೆ.

ತೌಹಿಬ್ ಪಾಷ ಕೊಲೆಯಾದ ಪತಿ. ಪತ್ನಿ ಸೋಹಾನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಗಲಾಟೆ ನಡೆದು ಕೊಲೆ ಮಾಡಿದ್ದಾರೆ. ಪತ್ನಿ, ಆಕೆಯ ತಾಯಿ, ಮತ್ತು ತಂದೆ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ತೌಹಿಬ್ ಪಾಷ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

ಸದ್ಯ ಹೆಂಡತಿ, ಅತ್ತೆ, ಮಾವನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Share This Article