ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

1 Min Read

ನವದೆಹಲಿ: 2026-27ರ ಹಣಕಾಸು ವರ್ಷದ ಮೊದಲ ಹಣಕಾಸು ನೀತಿಯನ್ನು ಆರ್‌ಬಿಐ (RBI) ಪ್ರಕಟಿಸಿದೆ. ಇದೇ ವೇಳೆ ರೆಪೊ ದರವನ್ನು ಶೇಕಡಾ 5.25ರಲ್ಲಿ ಯಥಾಸ್ಥಿತಿಯಲ್ಲೇ ಮುಂದುವರಿಸಲು ನಿರ್ಧರಿಸಿದೆ.

ಎಂಪಿಸಿ ಸಭೆಯ ನಿರ್ಧಾರವನ್ನು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ (Sanjay Malhotra) ಪ್ರಕಟಿಸಿದ್ದಾರೆ. ಇದೇ ವೇಳೆ ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ ಹಣದುಬ್ಬರ ಏರಿಕೆಯಾಗುವ ಸಾಧ್ಯತೆ ಇದ್ದು, ಬಡ್ಡಿದರ ಇಳಿಸದೇ ಇರುವ ತೀರ್ಮಾನವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.ಇದನ್ನೂ ಓದಿ: ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

2026-27ನೇ ಹಣಕಾಸು ವರ್ಷದಲ್ಲಿ ಹಣದುಬ್ಬರ ಶೇ. 4.6 ಇರಬಹುದು ಎಂದು ಆರ್‌ಬಿಐ ಅಂದಾಜಿಸಿದೆ. ದೇಶದ ಜಿಡಿಪಿ ಸರಾಸರಿಯಾಗಿ ಶೇ. 6.9 ಜಿಡಿಪಿ ಬೆಳೆಯಬಹುದು ಎಂದು ಆರ್‌ಬಿಐ ಅಂದಾಜಿಸಿದೆ.

 

 

Share This Article