ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ

0 Min Read

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ (Yelahanka) ನ್ಯೂಟೌನ್‌ನಲ್ಲಿ ನಡೆದಿದೆ.

23 ವರ್ಷದ ಅಭಿಷೇಕ್ ಆತ್ಮಹತ್ಯೆಗೆ ಶರಣಾದ ಯುವಕ. ಯಲಹಂಕ ಉಪನಗರದಲ್ಲಿರುವ ತಮ್ಮ ಮನೆಯಲ್ಲಿ ಎರಡು ಪುಟದ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೀತಿ ವಿಷಯಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ತಂದೆ, ತಾಯಿ ನನ್ನ ಚೆನ್ನಾಗಿ ನೋಡಿಕೊಳ್ಳುತ್ತಿದ್ದರು‌. ಆದರೆ ಅವರಿಗೆ ನಾನು ಒಳ್ಳೆಯ ಮಗನಾಗಲಿಲ್ಲ. ಕ್ಷಮಿಸಿ ಮುಂದಿನ ಜನ್ಮದಲ್ಲಿ ನಾನು ನಿಮ್ಮೆಲ್ಲರೊಂದಿಗೆ ಸಂತೋಷವಾಗಿರುತ್ತೇನೆ. ​ನನ್ನ ಹೆಂಡತಿಗೂ ನಾನು ಕ್ಷಮೆ ಕೇಳುತ್ತಿದ್ದೇನೆ, ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಾನು ನಿನ್ನನ್ನು ಮದುವೆಯಾದೆ. ನನ್ನ ಮಗುವನ್ನು ಮಿಸ್ ಮಾಡಿಕೊಳ್ಳುತ್ತಿದೇನೆ. ಆದರೆ ಪತ್ನಿಯ ನಡುವಳಿಕೆ ಇತ್ತೀಚಿಗೆ ಸರಿಯಾಗಿ ಇರಲಿಲ್ಲ. ನನ್ನ ಪ್ರೀತಿ ನನಗೆ ಉಸಿರಾಗಿತ್ತು. ಈಗ ಆ ಪ್ರೀತಿ ಕೊನೆಗೊಂಡಿದೆ. ಆದ್ದರಿಂದ ನಾನು ನನ್ನ ಜೀವನ ಕೊನೆಗೊಳಿಸುತ್ತಿದ್ದೇನೆಂದು ಎಂದು ಬರೆದುಕೊಂಡಿದ್ದಾನೆ.

ಎಲ್ಲರಿಗೂ ಹೇಳುತ್ತಿದ್ದೇನೆ ದಯವಿಟ್ಟು ಯಾರನ್ನೂ ಪ್ರೀತಿಸಬೇಡಿ. ಈಗಿನ ಕಾಲದಲ್ಲಿ ಎಲ್ಲರೂ ವಂಚಕರೇ. ನನ್ನ ಎಲ್ಲಾ ಸ್ನೇಹಿತರಿಗೆ ಗುಡ್ ಬೈ. ಆ ಪ್ರೀತಿಯ ಕಾರಣದಿಂದ ನಿಮಗೆಲ್ಲರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ. ಎಲ್ಲರೂ ನನ್ನನ್ನು ಪ್ರೀತಿಸುವುದರ ಜೊತೆಗೆ ನನ್ನೊಂದಿಗೆ ಸಂತೋಷವಾಗಿದ್ದರು. ಆದರೆ ನಾನು ನಿಮಗ್ಯಾರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ. ನನ್ನನ್ನು ಕ್ಷಮಿಸಿ ಎಂದು ಉಲ್ಲೇಖಿಸಿದ್ದಾನೆ.

ಆತ್ಮಹತ್ಯೆಗೆ ಆಕೆಯ ಪ್ರೇಯಸಿ ಹಾಗೂ ಪೋಷಕರು ನೀಡುತ್ತಿದ್ದ ಕಿರಕುಳ ಕಾರಣವಾ ಎಂದು ಮೃತ ಅಭಿಷೇಕ್ ಕಡೆಯವರು ಯಲಹಂಕ ಉಪನಗರ ಪೊಲೀಸ್ ಠಾಣೆಗೆ ದೂರು ನೋಡಿದ್ದಾರೆ. ದೂರಿನ ಮೇರೆಗೆ ಪ್ರೇಯಸಿ ಹಾಗೂ ಪೋಷಕರ ವಿರುದ್ದ ಎಫ್ಐಆರ್ ಮಾಡಿಕೊಳ್ಳಲಾಗಿದೆ.ಇದನ್ನೂ ಓದಿ: ಇದನ್ನೂ ಓದಿ: ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Share This Article