ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ (Confident Group) ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್(CJ Roy) ಆತ್ಮಹತ್ಯೆ ಪ್ರಕರಣದ (Suicide Case) ತನಿಖೆ ಪೂರ್ಣಗೊಂಡಿದೆ. ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ತೀರ್ಮಾನಕ್ಕೆ ವಿಶೇಷ ತನಿಖಾ (SIT) ತಂಡ ಬಂದಿದೆ.
ಆದಾಯ ತೆರಿಗೆ(Income Tax) ಅಧಿಕಾರಿಗಳ ಒತ್ತಡಕ್ಕೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿತ್ತು.
ಎಸ್‌ಐಟಿ ತನಿಖೆಯ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿದೆ. ಸಿಜೆ ರಾಯ್ ಅವರು ಮಾನಸಿಕ ಖಿನ್ನತೆಯಿಂದ(Mental Depression) ಬಳಲುತ್ತಿದ್ದರು. ಈ ಸಂಬಂಧ ಹಲವು ತಿಂಗಳ ಕಾಲ ಖಿನ್ನತೆಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಕೆಲ ತಿಂಗಳಿನಿಂದ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದರು. ಇದನ್ನೂ ಓದಿ: ಪಿಸ್ತೂಲ್‌ನಿಂದ ಶೂಟ್ ಮಾಡಿದ್ರೂ ಯಾರಿಗೂ ಗೊತ್ತಾಗಿಲ್ಲ ಯಾಕೆ? – ಚರ್ಚೆಗೆ ಗ್ರಾಸವಾಗಿದ್ದ ಪ್ರಶ್ನೆಗೆ ಸಿಕ್ತು ಉತ್ತರ
ಈಗಾಗಲೇ ತನಿಖೆ ಪೂರ್ಣಗೊಂಡಿದ್ದು ಶೀಘ್ರವೇ ಎಸ್‌ಐಟಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆಯಿದೆ.
ಬೆಂಗಳೂರಿನ ಲ್ಯಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಸಿ.ಜೆ. ರಾಯ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಜನವರಿ 30 ರಂದು ಬೆಂಗಳೂರಿನ ರಿಚ್‌ಮಂಡ್ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಐಟಿ ಅಧಿಕಾರಿಗಳ ವಿಚಾರಣೆಯ ಸಮಯದಲ್ಲಿ ತಮ್ಮ ಕೊಠಡಿಗೆ ತೆರಳಿ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.


