ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಏ.15ಕ್ಕೆ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ.
ಆದಿಚುಂಚನಗಿರಿ ಮಠದಲ್ಲಿ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ (Gangadharnath Sri Gadduge) ಉದ್ಘಾಟನೆ ಮಾಡಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶ್ರೀ ಮಠದ ಕುರಿತು ಮಾತನಾಡಲಿದ್ದಾರೆ. ಫೆಬ್ರವರಿ ತಿಂಗಳಲ್ಲೇ ಅವರು ಬರಬೇಕಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ
ಏ.15 ರಂದು ಮೋದಿಯವರು ಬರುವ ಸಾಧ್ಯತೆ ಇದೆ. ಪ್ರಧಾನಿಗಳ ಆಗಮನದ ಅಧಿಕೃತ ಟಿಪಿ ಬರುವುದು ಮಾತ್ರ ಬಾಕಿ ಇದ್ದು, ಕಾರ್ಯಕ್ರಮಕ್ಕೆ ಚುಂಚನಗಿರಿ ಮಠ ಹಾಗೂ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದನ್ನೂ ಓದಿ: ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್ – ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ವಿದ್ಯಾರ್ಥಿನಿ ತಾಯಿ

