ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಮಾಡಿದ್ದ ಮೂವರು ಆರೋಪಿಗಳಿಗೆ ಶಿರಸಿಯ 1 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ.
ಉತ್ತರ ಕನ್ನಡ (Uttara Kannada) ಜಿಲ್ಲೆಯ ಹಳಿಯಾಳ ತಾಲೂಕಿನ ಬಿದ್ರಳ್ಳಿಯ ಕೇಶವ ಪಾಂಡುರಂಗ ಕಿತ್ತೂರಕರ್ ಆಸ್ತಿಯಲ್ಲಿ ತನ್ನ ಪಾಲನ್ನು ಕೇಳಿದ್ದ. ಅದನ್ನು ತಪ್ಪಿಸುವ ಉದ್ದೇಶದಿಂದ ಅಕ್ಷಯ ಯಾನೆ ಆಕಾಶ ಪಾಂಡುರಂಗ ಕಿತ್ತೂರಕರ್, ಪಾಂಡುರಂಗ ಕೀರಪ್ಪ ಕಿತ್ತೂರಕರ್ ಹಾಗೂ ಲತಾ ತುಳಸಾಯಿ ಕೋಂ ಪಾಂಡುರಂಗ ಕಿತ್ತೂರಕರ್ ಸೇರಿದಂತೆ 5 ಜನ ಈತನನ್ನು ಕೊಲೆಗೈದಿದ್ದರು. ಇದನ್ನೂ ಓದಿ: ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ
ಈ ಕುರಿತಂತೆ ಅಂದಿನ ತನಿಖಾಧಿಕಾರಿ ಹಳಿಯಾಳದ ಪೊಲೀಸ್ ನಿರೀಕ್ಷಕ ಬಿ.ಎಸ್.ಲೋಕಾಪುರ 2019ರ ಅಕ್ಟೋಬರ್ 15 ರಂದು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು.
ಕೊಲೆ ಪ್ರಕರಣವನ್ನು ಕೈಗೆತ್ತಿಕೊಂಡ ನಗರದ 1 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ ಪೀಠದ ಯಲ್ಲಾಪುರ ಪೀಠಾಸಿನ ನ್ಯಾಯಾಧೀಶರಾದ ಕಿರಣ ಕಿಣಿ, ಆರೋಪಿಗಳ ವಿಚಾರಣೆ ನಡೆಸಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ರಾಜೇಶ ಮಳಗಿಕರ್ ವಾದವನ್ನು ಮಂಡಿಸಿ ನ್ಯಾಯ ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

