ಬೇಲೂರು | ʻಗಜಾಸುರʼನ ದಾಳಿಗೆ ರೈತ ಬಲಿ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

1 Min Read

ಹಾಸನ: ಕಾಡಾನೆ (Elephant) ದಾಳಿಗೆ ರೈತರೊಬ್ಬರು ಬಲಿಯಾದ ಘಟನೆ ಬೇಲೂರು (Belur) ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ನಡೆದಿದೆ.

- Advertisement -

ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿಯನ್ನು ರಾಜಶೆಟ್ಟಿ (65) ಎಂದು ಗುರುತಿಸಲಾಗಿದೆ. ಇಂದು (ಏ.12) ಬೆಳಿಗ್ಗೆ ತೋಟಕ್ಕೆ ತೆರಳಿದ್ದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಸೊಂಡಿಲಿನಿಂದ ಎತ್ತಿ ಬಿಸಾಡಿ, ತುಳಿದು ಸಾಯಿಸಿದೆ. ಮೃತದೇಹದ ಸ್ವಲ್ಪ ದೂರದಲ್ಲೇ ಕಾಡಾನೆ ಕೆಲಕಾಲ ನಿಂತುಕೊಂಡಿತ್ತು. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಇದನ್ನೂ ಓದಿ: ಸೊಂಡಿಲಿನಿಂದ ಅರ್ಚಕನನ್ನು ಎತ್ತಿ ಎಸೆದ ಉತ್ಸವದ ಆನೆ – ವೀಡಿಯೋ ವೈರಲ್

- Advertisement -

- Advertisement -

ಸ್ಥಳಕ್ಕೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಹಾಗೂ ಅರೇಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆ ಹಾವಳಿಯಿಂದ ಹೊಲ, ತೋಟಗಳಿಗೆ ತೆರಳಲು ಭಯವಾಗುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಆನೆಯನ್ನು ಸೆರೆಹಿಡಿಯಬೇಕು ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

- Advertisement -

Share This Article