- ತಮ್ಮ ಪುತ್ಥಳಿ ಅನಾವರಣಗೊಳಿಸಿದ ಸಿಎಂ
ಚಿಕ್ಕಮಗಳೂರು: ಎನ್ಆರ್ಪುರ (NR Pura) ಪಟ್ಟಣದ ಹೊರಹೊಲಯದಲ್ಲಿ ನಿರ್ಮಾಣಗೊಂಡಿರುವ ತಮ್ಮದೇ ಹೆಸರಿನ ಸೇತುವೆಯನ್ನು (Siddaramaiah Bridge) ಸಿಎಂ ಸಿದ್ದರಾಮಯ್ಯ (CM Siddaramaiah) ಉದ್ಘಾಟಿಸಿದ್ದಾರೆ.
* ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು. ಈಗ ನನ್ನ ಅಧಿಕಾರಾವಧಿಯಲ್ಲಿಯೇ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ. ಬಿಜೆಪಿಯವರ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮವಾಗಿರಲಿಲ್ಲ.
* ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ.…
— Siddaramaiah (@siddaramaiah) April 12, 2026
ಭದ್ರಾ ಹಿನ್ನೀರಿನ ಹಂದೂರು ಬಳಿ 38 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ 58 ಮೀಟರ್ ಉದ್ದದ ಸೇತುವೆ ಇದಾಗಿದೆ. ಹತ್ತಾರು ಹಳ್ಳಿ ಗ್ರಾಮಸ್ಥರು 6 ದಶಕಗಳಿಂದ ಸೇತುವೆಗೆ ಬೇಡಿಕೆ ಇಟ್ಟಿದ್ದರು. ಸೇತುವೆ ನಿರ್ಮಾಣದಿಂದ 10ಕ್ಕೂ ಹೆಚ್ಚು ಹಳ್ಳಿಗಳಿಗೆ ವರದಾನವಾಗಿದೆ. ಗ್ರಾಮಸ್ಥರು ಪಟ್ಟಣಕ್ಕೆ ಬರಲು ಮೊದಲು 30 ಕಿಮೀ ಸುತ್ತಿ ಬರಬೇಕಿತ್ತು. ಈ ದೂರವನ್ನು ಸೇತುವೆ ಕೇವಲ 3 ಕಿಮೀಗೆ ಇಳಿಸಿದೆ. ಇದೇ ವೇಳೆ ಅವರ ಪುತ್ಥಳಿಯನ್ನು ಸಹ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಇದನ್ನೂ ಓದಿ: ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್
ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು. ಈಗ ನನ್ನ ಅಧಿಕಾರಾವಧಿಯಲ್ಲಿಯೇ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ. ಬಿಜೆಪಿಯವರ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮವಾಗಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: 4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ


